ಕಾವೇರಿ ವಿವಾದ ಇತ್ಯರ್ಥಕ್ಕೆ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಾರಿ ಉರುಳು ಸೇವೆ

4:31 PM, Monday, September 19th, 2016
Share
1 Star2 Stars3 Stars4 Stars5 Stars
(No Ratings Yet)
Loading...

janardana-poojaryಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ನದಿ ವಿವಾದದ ಇತ್ಯರ್ಥಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಮಾಡಿದರು.

ಗೋಕರ್ಣನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಳ್ಳಿಯ ರಥದಲ್ಲಿ ದೇವರ ರಥೋತ್ಸವ ನಡೆಯಿತು. ರಥವನ್ನು ಎಳೆಯುತ್ತಿದ್ದಂತೆ ಮುಂಭಾಗದಲ್ಲಿ ಜನಾರ್ದನ ಪೂಜಾರಿ ಉರುಳು ಸೇವೆ ನಡೆಸಿದರು. 20 ನಿಮಿಷದಲ್ಲಿ ದೇವಸ್ಥಾನದ ಹೊರಾಂಗಣದಲ್ಲಿ ಒಂದು ಸುತ್ತು ಉರುಳು ಸೇವೆ ನಡೆಸಿದರು.

ಶಾಸಕ ಜೆ.ಆರ್.ಲೋಬೋ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಪುರುಷೋತ್ತಮ ಚಿತ್ರಾಪುರ, ರಾಧಾಕೃಷ್ಣ, ಅಪ್ಪಿ, ಮುಖಂಡ ಹರಿಕೃಷ್ಣ ಬಂಟ್ವಾಳ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ ಮೊದಲಾದವರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English