ಮಂಗಳೂರು: ಅವ್ಯವಸ್ಥೆ ಹಾಗೂ ಸಮಸ್ಯೆಗಳ ಆಗರವಾಗಿರುವ ಬೆಳುವಾಯಿ ಮತ್ತು ಕಲ್ಲಮುಂಡ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳೂರು ತಾಲೂಕು ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನ ಸಂಘಟನೆಯ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳುವಾಯಿ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಇಲ್ಲ. ಆಸ್ಪತ್ರೆಗೆ ಬಂದ ಹಲವಾರು ರೋಗಿಗಳು ಚಿಕಿತ್ಸೆ ಇಲ್ಲದೆ ವಾಪಸ್ ತೆರಳುತ್ತಿರುವುದು ಇಲ್ಲಿ ಸಾಮಾನ್ಯದಂತಾಗಿತ್ತು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಆವರಣದಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿವೆ.
ಕಲ್ಲಮುಂಡ್ಕೂರು ಆಸ್ಪತ್ರೆಯ ವೈದ್ಯಾಧಿಕಾರಿ ತರಬೇತಿಗೆ ತೆರಳಿರುವ ಬಗ್ಗೆ ದಾಖಲೆಗಳಿಂದ ತಿಳಿದು ಬಂದಿದ್ದು, ಅವರಿಗೆ ಕರೆ ಮಾಡಿದಾಗ ಅವರು ಉಡಾಫೆಯಿಂದ ಮಾತನಾಡಿದ್ದಾರೆ. ರೋಗಿಗಳು ಬಂದಾಗಲೂ ಅವರ ವರ್ತನೆ ಹೀಗೆಯೇ ಇರುತ್ತದೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಗೆ ದೂರು ನೀಡಲಾಗುವುದು ಎಂದು ಮಾನವ ಸಂಘಟನೆಯ ತಾಲೂಕು ಅಧ್ಯಕ್ಷ ರತ್ನಾಕರ ದೇವಾಡಿಗ ತಿಳಿಸಿದರು.
ಈ ವೇಳೆ ಪಂಚಾಯತ್ ಸದಸ್ಯ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಸುಭಾಸ್ ಕಾಫಿಕಾಡು, ಸಹ ಕಾರ್ಯದರ್ಶಿ ಪಾರ್ವತಿ, ಸದಸ್ಯರಾದ ಸುರೇಶ್, ಸುಖಾನಂದ ಶೆಟ್ಟಿ, ಮೋಹಿನಿ ಮತ್ತು ಮೊಹಮ್ಮದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English