ಬುದ್ಧಿಮಾಂದ್ಯ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ: ಸಚಿವೆ ಉಮಾಶ್ರೀ

4:33 PM, Monday, September 26th, 2016
Share
1 Star2 Stars3 Stars4 Stars5 Stars
(No Ratings Yet)
Loading...

mythri-mahotsavaಮೈಸೂರು: ಬುದ್ಧಿಮಾಂದ್ಯ ಮಕ್ಕಳಿಗೆ ಅನುಕಂಪಕ್ಕಿಂತ ಸಮಾಜದಲ್ಲಿ ಹೇಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂಬುದರ ಮಹತ್ವವನ್ನು ತಿಳಿಸಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದರು.

ಮಾನಸ ಗಂಗೋತ್ರಿಯಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈತ್ರಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ವತಿಯಿಂದ ಏರ್ಪಡಿಸಲಾಗಿದ್ದ ಮೈತ್ರಿ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬುದ್ಧಿಮಾಂದ್ಯ ಮಕ್ಕಳು ಇತರೆ ಮಕ್ಕಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಬುದ್ಧಿಮಾಂದ್ಯ ಮಕ್ಕಳು ಹಲವು ಕ್ಷೇತ್ರಗಳಲ್ಲಿ ವಿಶ್ವದಾಖಲೆ ನಿರ್ಮಿಸಿರುವ ಅನೇಕ ನಿದರ್ಶನಗಳಿವೆ. ಆದರೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ದಿಸೆಯಲ್ಲಿ ಹಿನ್ನಡೆ ಉಂಟಾಗಿದೆ. ಇವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಎಲ್ಲ ಸೌಲಭ್ಯ ನೀಡುತ್ತಿದೆ. ಇದನ್ನು ಪೋಷಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಬುದ್ಧಿಮಾಂದ್ಯ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದಿಸೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಕೆಲವು ಎನ್‌‌‌ಜಿಒಗಳು ಮುಂದೆ ಬಂದಿರುವುದು ಸ್ವಾಗತಾರ್ಹ. ಮೈತ್ರಿ ಬುದ್ಧಿಮಾಂದ್ಯ ಮಕ್ಕಳ ಶಾಲೆಯು ಬುದ್ಧಿಮಾಂದ್ಯ ಮಕ್ಕಳ ಪ್ರಗತಿಗಾಗಿ ಕಂಕಣ ಬದ್ಧವಾಗಿರುವುದು ಸಂತಸದ ಸಂಗತಿ. ಮುಂದಿನ ದಿನಗಳಲ್ಲೂ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಮನವಿ ಮಾಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English