ಕಣಚೂರು ಸಂಸ್ಥೆ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಪಡೆಯಲಿದೆ: ರಮಾನಾಥ ರೈ

11:35 AM, Wednesday, September 28th, 2016
Share
1 Star2 Stars3 Stars4 Stars5 Stars
(No Ratings Yet)
Loading...

kanachur-institutionಉಳ್ಳಾಲ: ಕಣಚೂರು ಮೋನು ಅವರು ಶ್ರಮಜೀವಿಯಾಗಿ, ಯಶಸ್ವಿ ಉದ್ಯಮಿಯಾಗಿ ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ಕಾಲಿರಿಸಿ ಇದೀಗ ವೈದ್ಯಕೀಯ ಕಾಲೇಜು ಸ್ಥಾಪಿಸಿರುವುದು ಅವರಲ್ಲಿರುವ ಕ್ರಿಯಾಶೀಲತೆ ಮತ್ತು ಕಾರ್ಯತತ್ಪರತೆಗೆ ಸಾಕ್ಷಿ ಎಂದು ಸಚಿವ ಬಿ. ರಮಾನಾಥ ರೈ ಅಭಿಪ್ರಾಯಿಸಿದರು.

ದೇರಳಕಟ್ಟೆಯ ನಾಟೆಕಲ್‌ನ ಕಣಚೂರು ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಆ್ಯಂಡ್‌ ರಿಸರ್ಚ್‌ ಸೆಂಟರ್‌ನ ಕ್ಯಾಂಪಸ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡ ಪ್ಯಾರಾ ಮೆಡಿಕಲ್‌ ಕೋರ್ಸ್‌, ನರ್ಸಿಂಗ್‌ ಹಾಗೂ ಫಿಸಿಯೋಥೆರಪಿ ಕಾಲೇಜು ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿಯ ಬದುಕಿನಲ್ಲಿ ಶ್ರೀಮಂತಿಕೆ, ಆಸ್ತಿ, ಸಂಪತ್ತು ಕ್ಷಣಿಕ. ಆದರೆ, ಸಮಾಜ ಸೇವೆಯೊಂದಿಗೆ ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಸಮಾಜ ಗೌರವಿಸುತ್ತದೆ. ಅದು ಶಾಶ್ವತ. ಕಣಚೂರು ಮೋನು ಅವರ ದೂರದೃಷ್ಟಿತ್ವದ ಫಲವಾಗಿ ಇಂದು ವೈದ್ಯಕೀಯ ಕಾಲೇಜು ಸ್ಥಾಪನೆ ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿ ಕಣಚೂರು ಸಂಸ್ಥೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಪಡೆಯಲಿದೆ ಎಂದು ರಮಾನಾಥ ರೈ ಹೇಳಿದರು. ನಿಟ್ಟೆ ವಿ.ವಿ. ಸಹ ಕುಲಾಧಿಪತಿ ಡಾ| ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ, ದ.ಕ. ಜಿಲ್ಲೆ ಬ್ಯಾಂಕಿಂಗ್‌, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರದ ಗಮನ ಸೆಳೆದಿದೆ. ಇದಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣ, ನಿಸ್ವಾರ್ಥ ಸೇವೆ ಹಾಗೂ ಕಾರ್ಯವೈಖರಿ ಕಾರಣ ಎಂದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್‌. ಲೋಬೊ, ಕೇಂದ್ರ ಮಾಜಿ ಸಚಿವೆ ಡಿ.ಕೆ. ತಾರಾದೇವಿ, ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ| ಎಂ. ಚಂದ್ರಶೇಖರ್‌, ಮಂಗಳೂರು ವಿ.ವಿ. ಕುಲಪತಿ ಪ್ರೊ| ಕೆ. ಭೈರಪ್ಪ, ಉಳ್ಳಾಲ ಸಯ್ಯಿದ್‌ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್‌ ರಶೀದ್‌, ಜಿ.ಪಂ. ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ, ಉದ್ಯಮಿ ಅಬ್ದುಲ್‌ ಖಾದರ್‌ ಜಾಲ್ಸೂರು, ಲಯನ್ಸ್‌ ಕ್ಲಬ್‌ ಮಂಗಳ ಗಂಗೋತ್ರಿ ಮಾಜಿ ಅಧ್ಯಕ್ಷ ರಘುರಾಮ ಕಾಜವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಧ್ಯಕ್ಷ ಕೋಡಿಜಾಲ್‌ ಇಬ್ರಾಹಿಂ ಹಾಗೂ ಕೃಷಿಕ ಸಮಾಜದ ಅಧ್ಯಕ್ಷ ಹೈದರ್‌ ಪರ್ತಿಪ್ಪಾಡಿ ಉಪಸ್ಥಿತರಿದ್ದರು.

ಸಂಸ್ಥೆಯ ಅಧೀನದ ವಿವಿಧ ಕಾಲೇ ಜುಗಳ ಪ್ರಾಂಶುಪಾಲರು, ಡೀನ್‌, ವಿಭಾಗ ಮುಖ್ಯಸ್ಥರು, ಆಸ್ಪತ್ರೆಯ ಆಡಳಿತಾಧಿಕಾರಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಭಾಗವಹಿಸಿದ್ದರು. ಕಣಚೂರು ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಮತ್ತು ಸಂಶೋಧನ ಕೇಂದ್ರದ ಅಧ್ಯಕ್ಷ ಯು.ಕೆ. ಮೋನು ಸ್ವಾಗತಿಸಿದರು. ಸಾಹಿಲ್‌ ಝಾಹಿರ್‌ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ನಿರ್ದೇಶಕ ಕಣಚೂರು ಅಬ್ದುಲ್‌ ರಹಿಮಾನ್‌ ವಂದಿಸಿದರು.

ದೇರಳಕಟ್ಟೆಯಲ್ಲಿ ಪ್ರಾರಂಭಗೊಂಡಿರುವ ಕಣಚೂರು ಮೆಡಿಕಲ್‌ ಕಾಲೇಜು ಜಿಲ್ಲೆಯಲ್ಲಿ ‘ದಿ ಯಂಗೆಸ್ಟ್‌ ಮೆಡಿಕಲ್‌ ಕಾಲೇಜು’. ದ.ಕ. ಜಿಲ್ಲೆಯಲ್ಲಿ ಇರುವಷ್ಟು ವೈದ್ಯಕೀಯ ಕಾಲೇಜುಗಳು ದೇಶದಲ್ಲಿ ಎಲ್ಲಿಯೂ ಇಲ್ಲ. ಅದರಲ್ಲೂ ದೇರಳಕಟ್ಟೆ ಮುಂದಿನ ದಿನಗಳಲ್ಲಿ ಮೆಡಿಕಲ್‌ ಸ್ಟ್ರೀಟ್‌ ಆಗಿ ಪರಿವರ್ತನೆಯಾಗಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English