ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ದ.ಕ. ಜಿಲ್ಲೆಯಲ್ಲಿ ವಿಫುಲ ಅವಕಾಶವಿದೆ. ಪ್ರವಾಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಸಹಿತ ಎಲ್ಲಾ ರೀತಿಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವೆಂದು ಸಚಿವ ಬಿ.ರಮಾನಾಥ ರೈ ಹೇಳಿದರು.
ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸೋದ್ಯಮದ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆಯಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದರು.
ಜಿಲ್ಲಾಧಿಕಾರಿ ಡಾ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ 15 ದಿನದೊಳಗೆ ಸಮಾಲೋಚನಾ ಸಭೆ ನಡೆಸಿ ಕ್ರಿಯಾಯೋಜನೆ ರೂಪಿಸಲಾಗುವುದು. ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಮೂಡಿಬಂದ ಅಭಿಪ್ರಾಯಗಳ ಬಗ್ಗೆ ಆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದರು.
ಮಂಗಳೂರು ವಿವಿ ಕಾಲೇಜು ಪ್ರವಾಸೋದ್ಯಮ ಪ್ರಾಧ್ಯಾಪಕ ಪ್ರೊ. ಬಿ.ಎಸ್. ಶ್ರೀರಾಜ್, ಪಣಂಬೂರು ಬೀಚ್ ಟೂರಿಸಂ ಸಿಇಓ ಯತೀಶ್ ಬೈಕಂಪಾಡಿ, ಕೆನರಾ ಚೇಂಬರ್ಸ್ ಅಧ್ಯಕ್ಷ ಜೀವನ್ ಸಲ್ಡಾನ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಪ್ರೊಬೆಶನರಿ ಐಎಎಸ್ ಅಧಿಕಾರಿ ಗಾರ್ಗ್ ಜೈನ್ ಸೇರಿ ಹಲವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English