ಯುವಕನಿಂದ ಆದಿವಾಸಿ ಯುವತಿಯೋರ್ವಳ ಮೇಲೆ ಅತ್ಯಾಚಾರ: ಆರೋಪಿ ಬಂಧನ

11:46 AM, Monday, October 3rd, 2016
Share
1 Star2 Stars3 Stars4 Stars5 Stars
(No Ratings Yet)
Loading...

lokesh-bangeraಮಂಗಳೂರು: ಆದಿವಾಸಿ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಗೇರುಕಟ್ಟೆ ನಿವಾಸಿ ಲೋಕೇಶ್ ಬಂಗೇರ (23) ಎಂಬಾತ ಬಂಧಿತ ಆರೋಪಿ. ಆರು ತಿಂಗಳ ಹಿಂದೆ ಇಲ್ಲಿನ ರೆಂಕೆದಗುತ್ತು ಸಮೀಪದ ಮನೆಯಿಂದ ಪೇಟೆ ಕಡೆ ಹೋಗುತ್ತಿದ್ದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ತಡೆದ ಈತ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಹೆದರಿದ ಯುವತಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎನ್ನಲಾಗಿದೆ.

ಇದೀಗ ಯುವತಿ ಗರ್ಭಿಣಿಯಾಗಿದ್ದು ದೂರು ನೀಡಿದ್ದಾಳೆ. ಯುವತಿಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English