ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಬ್ಯಾರಿ ಭಾಷಾ ದಿನಾಚರಣೆ ಮತ್ತು ಭಾಷಾ ಸಪ್ತಾಹ

4:29 PM, Tuesday, October 4th, 2016
Share
1 Star2 Stars3 Stars4 Stars5 Stars
(No Ratings Yet)
Loading...

beary-languageಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ನಗರದ ಅತ್ತಾವರದಲ್ಲಿರುವ ಕಚೇರಿಯಲ್ಲಿ ನಡೆದ ಬ್ಯಾರಿ ಭಾಷಾ ದಿನಾಚರಣೆ ಹಾಗೂ ಭಾಷಾ ಸಪ್ತಾಹ, ಪ್ರಚಾರ ಆಂದೋಲನ, ಪುಸ್ತಕ ಮಾರಾಟ ಜಾಥಾಕ್ಕೆ ಚಾಲನೆ ನೀಡಲಾಗಿದೆ.

ಬ್ಯಾರಿ ದಿನಾಚರಣೆ, ಸಪ್ತಾಹಕ್ಕೆ ಚಾಲನೆ ನೀಡಿದ ದ. ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ಆರ್. ರಶೀದ್ ಹಾಜಿ, ಜಿಲ್ಲೆಯಲ್ಲಿರುವ ಮದರಸ ಮತ್ತು ಮಸೀದಿಗಳಲ್ಲಿ ಶಿಕ್ಷಣ ಮತ್ತು ಧಾರ್ಮಿಕ ಉಪನ್ಯಾಸವನ್ನು ಬ್ಯಾರಿ ಭಾಷೆಯಲ್ಲೇ ನೀಡುವ ಮೂಲಕ ಬ್ಯಾರಿ ಭಾಷೆಯ ಅಭಿವೃದ್ಧಿಗೆ ಪ್ರಯತ್ನಗಳಾಗಬೇಕು. ಮದರಸ ಮತ್ತು ಮಸೀದಿಗಳಲ್ಲಿ ಶಿಕ್ಷಣ ಮತ್ತು ಧಾರ್ಮಿಕ ಉಪನ್ಯಾಸವನ್ನು ಮಲಯಾಳಂ ಬದಲಿಗೆ ಬ್ಯಾರಿ ಭಾಷೆಯಲ್ಲೇ ನೀಡುವ ನಿಟ್ಟಿನಲ್ಲಿ ಪ್ರಯತ್ನ ಹೆಚ್ಚಾಗುತ್ತಿದೆ ಎಂದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದಿಂದ ಸಿಗುವಂತಹ ಸಾಕಷ್ಟು ಯೋಜನೆಗಳ ಪ್ರಚಾರ ಮಾಡಬೇಕಾಗಿದೆ. ಶಿಕ್ಷಣ, ಆರೋಗ್ಯಕ್ಕೆ ಸಂಬಂಧಿಸಿದಂತೆ ಇರುವ ಹಲವು ಯೋಜನೆಗಳ ಮಾಹಿತಿಯನ್ನು ಬ್ಯಾರಿ ಅಕಾಡಮಿಯ ಮೂಲಕ ನೀಡುವಂತಹ ಪ್ರಯತ್ನವನ್ನು ಮಾಡಬೇಕಾಗಿದೆ ಎಂದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ. ಮಹಮ್ಮದ್ ಹನೀಫ್, ರಿಜಿಸ್ಟ್ರಾರ್ ಉಮರಬ್ಬ, ಸದಸ್ಯರಾದ ಮುಹಮ್ಮದ್ ಝಕರಿಯ ಕಲ್ಲಡ್ಕ, ಅಬ್ದುಲ್ ಹಮೀದ್ ಗೋಳ್ತಮಜಲು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English