ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ 194 ವಾಣಿಜ್ಯ ಕಟ್ಟಡಗಳು ಪಾರ್ಕಿಂಗ್ ಸ್ಥಳದಲ್ಲಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಈ ಪೈಕಿ ನಿಯಮ ಉಲ್ಲಂಘಿಸಿರುವ 69 ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಪತ್ರದ ಮೂಲಕ ಸೂಚಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳಾವಕಾಶವಿದ್ದರೂ ಅಲ್ಲಿ ಮಳಿಗೆ ನಿರ್ಮಿಸಿ ಕಾನೂನು ಉಲ್ಲಂಘಿಸಿರುವುದು ದೃಢಪಟ್ಟಿದೆ ಎಂದರು.
69 ಕಟ್ಟಡಗಳು ಸಂಪೂರ್ಣ ನಿಯಮ ಉಲ್ಲಂಘನೆ ಮಾಡಿರುವುದು ಸಾಬೀತಾಗಿದೆ. ಈ ಪೈಕಿ ಕೆಲವೊಂದು ಪ್ರಕರಣಗಳು ನ್ಯಾಯಾಲಯದಲ್ಲಿ ತನಿಖೆಯಲ್ಲಿವೆ.
Click this button or press Ctrl+G to toggle between Kannada and English