- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಮೆರಿಕ ಮತ್ತೊಮ್ಮೆ ಭಾರತದ ಪರ ಬೆಂಬಲ

uri-cross-border-terror1 [1]ವಾಷಿಂಗ್ಟನ್: ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಯೋಧರು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಮತ್ತೊಮ್ಮೆ ಭಾರತದ ಪರ ಬೆಂಬಲ ವ್ಯಕ್ತಪಡಿಸಿದೆ. ಭಾರತದ ದಾಳಿಯನ್ನು ಸಮರ್ಥಿಸಿರುವ ಅಮೆರಿಕಾ ಸ್ವ ರಕ್ಷಣೆ ನಿಟ್ಟಿನಲ್ಲಿ ಭಾರತಕ್ಕೆ ಇಂತಹ ದಾಳಿ ನಡೆಸಲು ಹಕ್ಕಿದೆ ಎಂದು ಹೇಳಿದೆ.

ಉರಿ ದಾಳಿ ಗಡಿಯಾಚೆಗಿನ ಭಯೋತ್ಪಾದನೆ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ 7 ಅಡಗುದಾಣಗಳ ಮೇಲೆ ಭಾರತ ನಡೆಸಿರುವ ದಾಳಿ ತಪ್ಪಲ್ಲ ಎಂದು ಅಮೆರಿಕಾ ಅಭಿಪ್ರಾಯಪಟ್ಟಿದೆ.

ಇದೇ ವೇಳೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿರುವ ಆಫ್ಘಾನಿಸ್ತಾನ ಗಡಿ ಪ್ರದೇಶ ಹಾಗೂ ಕಾಶ್ಮೀರ ಕುರಿತಂತೆ ನಿರ್ಣಯ ಕೈಗೊಳ್ಳುವ ಪಾಕ್‌‌ ಪ್ರಯತ್ನ ತಳ್ಳಿ ಹಾಕಿರುವ ಅಮೆರಿಕ ಯಾವುದೇ ದೇಶಕ್ಕೆ ತನ್ನ ಸ್ವರಕ್ಷಣೆ ಮಾಡಿಕೊಳ್ಳುವ ಹಕ್ಕಿದೆ ಎಂದು ಸ್ಪಷ್ಟವಾಗಿ ಹೇಳಿದೆ.

ಎನ್ಎಸ್‌‌ಜಿ ಸದಸ್ಯ ರಾಷ್ಟ್ರಗಳ ಪಟ್ಟಿಗೆ ಭಾರತಕ್ಕೆ ಸೇರಿಸುವ ನಮ್ಮ ಪ್ರಯತ್ನ ಮುಂದುವರಿದಿದ್ದು, ಇದೇ ವರ್ಷಾಂತ್ಯದೊಳಗೆ ಭಾರತವನ್ನು ಎನ್‌ಎಸ್‌ಜಿ ಪಟ್ಟಿಗೆ ಸೇರಿಸುವ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಹೇಳಿದೆ. ಈಗಾಗಲೇ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಹಳಿಸಿದ್ದು, ಮುಂದಿನ ದಿನಗಳಲ್ಲಿ ಉಗ್ರ ದಾಳಿಗೆ ಸಂಬಂಧಿಸಿದಂತೆ ಭಾರತದೊಂದಿಗೆ ನಾವು ಚರ್ಚೆ ನಡೆಸಿದ್ದು, ಅದಕ್ಕೆ ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದೆ.