ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬ್ಬಡಿ ಪಂದ್ಯಾಟ

3:43 PM, Tuesday, October 18th, 2016
Share
1 Star2 Stars3 Stars4 Stars5 Stars
(No Ratings Yet)
Loading...

Kabaddiಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಮೆಮೋರಿಯಲ್ ಟ್ರೋಫಿ ಅಂತರ್ ಕಾಲೇಜು ಕಬ್ಬಡಿ ಪಂದ್ಯಾಟಕ್ಕೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಚಾಲನೆ ನೀಡಿದರು.

ಬೆಸೆಂಟ್ ಸಂಧ್ಯಾ ಕಾಲೇಜು ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದ ಆಶ್ರಯದಲ್ಲಿ ಉರ್ವ ಮಾರ್ಕೆಟ್ ಮೈದಾನದಲ್ಲಿ ಆಯೋಜನೆಯಾಗಿರುವ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರನ್ನು ಕ್ರೀಡೆಯತ್ತ ಆಕರ್ಷಿಸುವ ಕೆಲಸ ಅಗತ್ಯವಾಗಿ ಆಗಬೇಕಿದ್ದು, ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಬೆಸೆಂಟ್ ಸಂಧ್ಯಾ ಕಾಲೇಜು ಪಿಟಿಎ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ದ.ಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಬಿ, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಮತ್ತು ಪ್ರಾಂಶುಪಾಲ ಡಾ.ಲಕ್ಷ್ಮಿ ನಾರಾಯಣ ಭಟ್ ಎ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English