ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ನಳಿನ್ ಕುಮಾರ್

2:04 PM, Friday, October 21st, 2016
Share
1 Star2 Stars3 Stars4 Stars5 Stars
(No Ratings Yet)
Loading...

Bjp-Workers-Protestಮಂಗಳೂರು: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಆರೋಪಿಗಳನ್ನು ಒಂದು ವಾರದೊಳಗೆ ಬಂಧಿಸುವ ಮೂಲಕ ಸೂಕ್ತ ಶಿಕ್ಷೆಗೊಳಪಡಿಸಬೇಕು. ಸರ್ಕಾರ ನಿರ್ಲಕ್ಷ್ಯ ವಹಿಸಿ, ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಸಿದ್ದಾರೆ.

ಅವರು ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಸಿದ್ದರಾಮಯ್ಯರ ಸರ್ಕಾರದಲ್ಲಿ ದೇಶಭಕ್ತರನ್ನು ದಮನಿಸಲಾಗುತ್ತಿದ್ದು, ಗೋ ಹಂತಕರು, ಭಯೋತ್ಪಾದಕರಿಗೆ ರಕ್ಷಣೆ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪದಿಂದ ನಿಷ್ಠಾವಂತ ಪೊಲೀಸರು ಸರಿಯಾಗಿ ಕರ್ತವ್ಯ ನಿರ್ವಹಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರು ಆತ್ಮಹತ್ಯೆಗೊಳಗಾಗುತ್ತಿದ್ದಾರೆ. ಇಷ್ಟಾದರೂ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Bjp-Workers-Protestಈ ಹಿಂದೆ ಗೋ ಹಂತಕನ ಹತ್ಯೆಯಾದಾಗ ಆತನ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ನೀಡಿದ ಸಿದ್ದರಾಮಯ್ಯನವರಿಗೆ ಪ್ರಶಾಂತ್ ಪೂಜಾರಿ ಹತ್ಯೆ ಕೊಡಗಿನ ಕುಟ್ಟಪ್ಪ, ಮೈಸೂರಿನ ರಾಜು ಹತ್ಯೆಯಂತಹ ಘಟನೆಗಳಲ್ಲಿ ಕನಿಷ್ಟ ಪಕ್ಷ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಬೇಕೆಂಬ ಮನಸ್ಥಿತಿ ಬರಲಿಲ್ಲ. ಉಗ್ರವಾದಕ್ಕೆ ಬೆಂಬಲ ನೀಡುವ ಸರ್ಕಾರ ಇದಾಗಿದೆ. ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸೂಕ್ತ ನ್ಯಾಯ ದೊರಕದೆ, ರಾಜ್ಯದಲ್ಲಿ ಗಲಭೆ ಸೃಷ್ಟಿಯಾದರೇ ಅದಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಲಿದೆ ಎಂದು ನಳಿನ್ ಕುಮಾರ್ ಎಚ್ಚರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English