ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 12 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಗರದ ಉರ್ವ ಮಾರುಕಟ್ಟೆ ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಇಂದು ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಪಾಲಿಕೆಯು ಉತ್ತಮವಾಗಿ ಆಡಳಿತವನ್ನು ನಿರ್ವಹಿಸುತ್ತಿದೆ. ಪಾಲಿಕೆಯ ವಾರ್ಡ್‌ಗಳಲ್ಲಿ ಸದಸ್ಯರು ಇನ್ನಷ್ಟು ಸಮರ್ಪಕವಾಗಿ ಕೆಲಸಗಳನ್ನು ಮಾಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಮೇಯರ್ ಹರಿನಾಥ್, ಮಾರುಕಟ್ಟೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಉಪ ಮೇಯರ್ ಸುಮಿತ್ರಾ ಕರಿಯ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಲ್ಯಾನ್ಸಿ ಲಾಟ್ ಪಿಂಟೋ, ಪ್ರತಿಪಕ್ಷ ನಾಯಕಿ ರೂಪ ಬಂಗೇರಾ, ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಸದಸ್ಯರಾದ ಜಯಂತಿ, ರಾಧಾಕೃಷ್ಣ, ಕವಿತಾ ಸನಿಲ್, ಕೇಶವ ಸನಿಲ್, ಪಾಲಿಕೆ ಆಯುಕ್ತ ಅಬ್ದುಲ್ ನಜೀರ್, ಮೂಡಾ ಆಯುಕ್ತ ಶ್ರೀಕಾಂತ್ ರಾವ್ ಮೊದಲಾದವರಿದ್ದರು.
Click this button or press Ctrl+G to toggle between Kannada and English