ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1096 ಗ್ರಾಂ. ತೂಕದ 33.56 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ತನ್ನ ಲಗೇಜ್ನಲ್ಲಿ ಬೆಳ್ಳಿ ಲೇಪಿತ ಸಾಮಗ್ರಿಗಳ ರೂಪದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಕಸ್ಟಮ್ಸ್ ಆಯುಕ್ತ ಡಾ. ಎಂ. ಸುಬ್ರಹ್ಮಣ್ಯಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English