ಮಂಗಳೂರು: ತಲವಾರಿನಿಂದ ಕಡಿದು ಬಜರಂಗದಳದ ಕಾರ್ಯಕರ್ತನ ಕೊಲೆಗೆ ಯತ್ನ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಕುತ್ತಾರ್ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ನಿವಾಸಿ ರಾಮ್ ಮೋಹನ್(32) ಕೊಲೆ ಯತ್ನಕ್ಕೆ ಒಳಗಾದವರು. ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳಿಂದ ತಲವಾರು ದಾಳಿ ನಡೆಸಲಾಗಿದೆ. ಗಂಭೀರ ಸ್ಥಿತಿಯಲ್ಲಿ ಮೋಹನ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆಯನ್ನು ಸಚಿವ ಯು.ಟಿ.ಖಾದರ್ ಖಂಡಿಸಿ ಬೆಂಗಳೂರಿನಿಂದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಅಲ್ಲದೆ ಮಂಗಳೂರು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ, ದುಷ್ಕರ್ಮಿಗಳನ್ನು ಪತ್ತೆಹಚ್ಚುವಂತೆ ಸೂಚಿಸಿದ್ದಾರೆ.
Click this button or press Ctrl+G to toggle between Kannada and English