ಕರ್ನಾಟಕ ಉಚ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಬೇಕೆಂದು ಒತ್ತಾಯಿಸಿ ವಕೀಲರ ಸಂಘದಿಂದ ಪ್ರತಿಭಟನೆ

12:22 PM, Saturday, November 12th, 2016
Share
1 Star2 Stars3 Stars4 Stars5 Stars
(No Ratings Yet)
Loading...

Mangaluru-bar-associationಮಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಬೇಕೆಂದು ಒತ್ತಾಯಿಸಿ ಮಂಗಳೂರು ವಕೀಲರ ಸಂಘದ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇದಕ್ಕೂ ಮುನ್ನ ಕೋರ್ಟ್‌ ಆವರಣದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು. ನಗರದ ವಿವಿಧ ಬಡಾವಣೆಗಳಲ್ಲಿ ಸಾಗಿದ ಈ ಜಾಥಾದಲ್ಲಿ ಜಿಲ್ಲೆಗೆ ಸಂಚಾರಿ ಪೀಠ ನೀಡುವಂತೆ ಘೋಷಣೆ ಕೂಗಲಾಯಿತು. ಈ ಪ್ರತಿಭಟನಾ ಜಾಥಾಕ್ಕೆ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಸಾಥ್‌ ನೀಡಿದ್ದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಚೆಂಗಪ್ಪ, ಈ ಭಾಗದ ಜನ ಹೈಕೋರ್ಟ್‌ನಲ್ಲಿ ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆದಾಡಬೇಕಾದ ಸ್ಥಿತಿ ಇದೆ. ಹೋದ ತಕ್ಷಣ ಪ್ರಕರಣ ಇತ್ಯರ್ಥ ಆಗುವುದಿಲ್ಲ.

Mangaluru-bar-associationಹಲವಾರು ಬಾರಿ ಅಲೆದಾಡಬೇಕಾಗುತ್ತದೆ. ಇದರಿಂದ ಜನಸಾಮಾನ್ಯರ ಸಮಯ, ಹಣ ವ್ಯರ್ಥವಾಗುತ್ತಿದೆ. ಮಂಗಳೂರಿನಲ್ಲಿ ಸಂಚಾರಿ ಪೀಠ ಆರಂಭವಾದರೆ ಈ ಭಾಗದ ಜನತೆಯ ಸಮಸ್ಯೆಗೆ ಪರಿಹಾರ ಇಲ್ಲಿಯೇ ದೊರೆಯಲಿದೆ ಎಂದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಯಶೋಧರ್ ಪಿ., ಕಾರ್ಯದರ್ಶಿ ರಾಘವೇಂದ್ರ ಹೆಚ್.ವಿ, ಖಜಾಂಜಿ ಯತೀಶ್, ನ್ಯಾಯವಾದಿಗಳಾದ ಕುಮಾರ್ ಚರಣ್, ದಿನಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English