ನ. 27 ರಂದು ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷ ದೀಪೋತ್ಸವ

3:00 PM, Monday, November 14th, 2016
Share
1 Star2 Stars3 Stars4 Stars5 Stars
(No Ratings Yet)
Loading...

Laksha deeposthsavaಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷ ದೀಪೋತ್ಸವ ನಿಮಿತ್ತ ನ. 27 ರಂದು ನಡೆಯುವ ಸರ್ವಧರ್ಮ ಸಮ್ಮೇಳನದ 84ನೇ ಅಧಿವೇಶನವು ಶಿರಹಟ್ಟಿಯ ಫಕೀರ ಸಿದ್ದರಾಮ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ನಂತರ ನ. 28 ರಂದು ನಡೆಯುವ ಸಾಹಿತ್ಯ ಸಮ್ಮೇಳದ 84ನೇ ಅಧಿವೇಶನವು ಬೆಂಗಳೂರಿನ ಖ್ಯಾತ ಸಾಹಿತಿ ಎಂ.ಎನ್. ವ್ಯಾಸ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನ. 24ರಿಂದ 29ರ ವರೆಗೆ ಲಕ್ಷ ದೀಪೋತ್ಸವವು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದ ಮೂಲಕ ಪ್ರಾರಂಭವಾಗಲಿದೆ. ಅಂದು ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಕ್ರೀಡಾಂಗಣದಲ್ಲಿ 39ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನ ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ.

ಸಂಜೆ 5ಕ್ಕೆ ದ.ಕ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ವಸ್ತು ಪ್ರದರ್ಶನ ಉದ್ಘಾಟಿಸುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಪ್ರತಿ ದಿನ ಬೆಳಿಗ್ಯೆ 9 ರಿಂದ ರಾತ್ರಿ 9 ರ ವರೆಗೆ ವಸ್ತು ಪ್ರದರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ. ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ನ. 25 ರಂದು ಕೆರೆಕಟ್ಟೆ ಉತ್ಸವ, ನ. 26ರಂದು ಉದ್ಯಾನೋತ್ಸವ, ಸಮ್ಮೇಳನ ಮಂಟಪದಲ್ಲಿ ಲಲಿತಕಲಾ ಗೋಷ್ಠಿ ನಡೆಯಲಿದೆ.

27ರಂದು ಸಂಜೆ 5ರಂದು ಸರ್ವಧರ್ಮ ಸಮ್ಮೇಳನವನ್ನು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ವಿ. ಗೋಪಾಲ ಗೌಡ ಉದ್ಘಾಟಿಸುವರು. ನವದೆಹಲಿಯ ಡಾ. ಜಯಕುಮಾರ್ ಉಪಾಧ್ಯೆ, ಪುತ್ತೂರಿನ ಯಕ್ಷಗಾನ ಕಲಾವಿದ ಜಬ್ಬಾರ್ ಸಮೊ ಮತ್ತು ಧಾರವಾಡದ ವಿದ್ಯಾ ನಿಕೇತನದ ನಿರ್ದೇಶಕ ಪ್ರಶಾಂತ್ ಡಿ’ಸೋಜಾ ಧಾರ್ಮಿಕ ಉಪನ್ಯಾಸ ನೀಡುವರು. ಚೆನ್ನೈನ ಗಾಯತ್ರಿ ಗಿರೀಶ್ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಶ್ರೀ ಸ್ವಾಮಿಯ ಕಂಚಿಮಾರುಕಟ್ಟೆ ಉತ್ಸವ ನಡೆಯಲಿದೆ. ನ. 29 ರಂದು ನಡೆಯುವ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ಮೂಲಕ ಲಕ್ಷ ದೀಪೋತ್ಸವ ಮುಕ್ತಾಯಗೊಳ್ಳಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English