- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Muhammad [1]ಮಂಗಳೂರು: ಕೊಣಾಜೆ ಠಾಣೆ ವ್ಯಾಪ್ತಿಯ ಹರೇಕಳ ಗ್ರಾಮದ ನ್ಯೂಪಡ್ಪು ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಕೊಣಾಜೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಜನಾಡಿ ಮಸೀದಿ ಸಮೀಪದ ನಿವಾಸಿ ಮಹಮ್ಮದ್(40) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 250 ಗ್ರಾಂ ತೂಕದ ಗಾಂಜಾ ಮತ್ತು ಗಾಂಜಾವನ್ನು ಅಡಗಿಸಿಟ್ಟಿದ್ದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.