ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಯಕ್ತರಾಗಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಡಾ. ವಿಜಯಪ್ರಕಾಶ್ ಸೋಮವಾರ ಜಿ.ಪಂ. ಸಿಇಒ ಆಗಿ ಅಧಿಕಾರ ವಹಿಸಿಕೊಂಡರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಆಡಳಿತದಲ್ಲಿ ಪಾರದರ್ಶಕತೆಗೆ ಆದ್ಯತೆ ಹಾಗೂ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜ್ಯಾರಿ ಗೊಳಿಸುವುದಾಗಿ ಅವರು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಕುಡಿಯುವ ನೀರಿನ ಕೊರತೆ ಮತ್ತು ಉತ್ತಮ ರಸ್ತೆ ಸೌಲಭ್ಯಗಳಿಂದ ವಂಚಿತವಾಗಿವೆ. ಮೂಲ ಸೌಕರ್ಯಗಳ ಅಭಿವೃದ್ಧಿ, ಸಂಪೂರ್ಣ ನೈರ್ಮಲೀಕರಣಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಿ ಬಿಟ್ಟು ಹೋಗಿರುವ ಪ್ರದೇಶಗಳನ್ನು ಗುರುತಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಗ್ರಾಮೀಣ ಪ್ರದೇಶಗಳ ಆರೋಗ್ಯ ಸೌಲಭ್ಯಗಳ ಅಭಿವೃದ್ದಿಗೆ ಒತ್ತು ನೀಡಲಾಗುವುದು. ಸರಕಾರದಿಂದ ಹೆಚ್ಚುವರಿ ಅನುದಾನ ಪಡೆದು ಇವೆಲ್ಲಾ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರವನ್ನು ಪಡೆದುಕೊಂಡು ಜನರ ನಿರೀಕ್ಷೆಗೆ ಪೂರಕವಾದ ಕ್ರಿಯಾಶೀಲತೆಯನ್ನು ತುಂಬಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ದಿಶೆಯಲ್ಲಿ ಎಲ್ಲ ಇಲಾಖೆಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಇಲಾಖೆಗಳಲ್ಲಿ ಪರಿಣಾಮಕಾರಿ ಆಡಳಿತವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ವರ್ಗಾವಣೆಯನ್ನು ಮಾಡಲಾಗುವುದು ಎಂದು ಹೇಳಿದರು.
ಡಾ. ವಿಜಯಪ್ರಕಾಶ್ ಅವರು ಪರ್ಸನಲ್ ಮ್ಯಾನೇಜ್‌ಮೆಂಟ್ ಹಾಗೂ ಇಂಡಸ್ಟಿಯಲ್ ರಿಲೇಶನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ, ನಗರ ಮತ್ತು ಕೊಳಚೆ ಪ್ರದೇಶಗಳ ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿಯನ್ನು ಗಳಿಸಿದ್ದಾರೆ. ಮಂಗಳೂರು ವಿವಿಯಲ್ಲಿ ಕಾಮರ್ಸ್ ಹಾಗೂ ಬಿಸಿನೆಸ್ ಆಡ್ಮಿನಿಸ್ಟ್ರೇಶನ್ ವಿಭಾಗದಲ್ಲಿ 5 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ 1987-88ರಲ್ಲಿ ಕರ್ನಾಟಕ ಆಡಳಿತ ಸೇವೆಗೆ ಸೇರ್ಪಡೆಗೊಂಡರು. ತಹಶೀಲ್ದಾರರಾಗಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿ, ಮುನ್ಸಿಪಲ್ ಆಯುಕ್ತರಾಗಿ, ಜಲಸಂಪನ್ಮೂಲ ಹಾಗೂ ಪೌರಾಡಳಿತ ಸಚಿವರ ಆಪ್ತಕಾರ್ಯದರ್ಶಿಯಾಗಿ, ಹಿಂದುಳಿದವರ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾಕ ನಿಗಮಗಳ ಆಡಳಿತ ನಿರ್ದೇಶಕರಾಗಿ, ಗ್ರಾಮೀಣ ಇಂಧನ ಕಾರ್ಯಕ್ರಮಗಳ ನಿರ್ದೇಶಕರಾಗಿ, ಬಂದರು,ಮೀನುಗಾರಿಕೆ ಮತ್ತು ಪರಿಸರ ಸಚಿವ ಜೆ.ಕೃಷ್ಣ ಪಾಲೆಮಾರ್ ಅವರ ಅಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
Click this button or press Ctrl+G to toggle between Kannada and English
December 15th, 2011 at 04:02:46
PY0eOB duqqbfoijcim, [url=http://xsvefpwixxvo.com/]xsvefpwixxvo[/url], [link=http://mkfutweyprns.com/]mkfutweyprns[/link], http://nbrznsdngmum.com/