ರಾಜ್ಯ ಸರಕಾರದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

8:45 PM, Monday, November 21st, 2016
Share
1 Star2 Stars3 Stars4 Stars5 Stars
(5 rating, 6 votes)
Loading...

hhsಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ, ಕೊಲೆ ಯತ್ನಗಳ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ರಾಜ್ಯದ ಪೊಲೀಸ್ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧಿಸಿದ್ದಾರೆ. ಆದ್ದರಿಂದ ರಾಜ್ಯದ ವಿವಿಧೆಡೆ ಕಳೆದ ಒಂದು ವರ್ಷದಲ್ಲಿ ಎಂಟು ಮಂದಿ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ದೂರಿದರು. ಮುಖ್ಯಮಂತ್ರಿ ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲೆಯಲ್ಲಿ ವಾತಾವರಣ ಹದಗೆಡಲು ಮುಖ್ಯಮಂತ್ರಿ, ಗೃಹ ಸಚಿವ ಡಾ. ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರಣ ಎಂದು ಆರೋಪಿಸಿದರು.

ಹಿತರಕ್ಷಣಾ ಸಮಿತಿ ಸಂಚಾಲಕ ಪ್ರೊ. ಎಂ.ಬಿ. ಪುರಾಣಿಕ್, ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಗೋಪಾಲ್, ವಿಶ್ವ ಹಿಂದೂ ಪರಿಷತ್‌ನ ರಾಧಾಕೃಷ್ಣ ಅಡ್ಯಂತಾಯ, ಅ.ಭಾ.ವಿ.ಪ.ದ ಮುಂದಾಳು ರಮೇಶ್ ಪಿ., ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ಶಾಸಕರಾದ ಪ್ರಭಾಕರ ಬಂಗೇರಾ ಸೇರಿದಂತೆ ಮೊದಲಾದವರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English