ಮಂಗಳೂರು: ಕೆಎಸ್‌ಆರ್‌ಟಿಸಿ ನಿಗಮವು ತನ್ನ 50ನೇ ಸಂಸ್ಥಾಪನಾ ದಿನವನ್ನು ಮಂಗಳೂರಿನ ವಿಭಾಹೀಯ ಕಚೇರಿಯಲ್ಲಿ ಸೋಮವಾರ ಆಚರಿಸಿತು. ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ಅವರು ನಗರ ವ್ಯಾಪ್ತಿಯಲಿ 4 ಸೆಟಲೈಟ್ ಬಸ್ ನಿಲ್ದಾಣಗಳ ನಿರ್ಮಾಣ ಕೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ನಗರ ಪ್ರದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ವಿಸ್ತಾರವಾಗಬೀಕಿದೆ, ನಗರ ಪ್ರದೇಶದಲ್ಲಿ ವಹಿವಾಟುಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ಫ್ಲೈ ಓವರ್‌ಗಳ ನಿರ್ಮಾಣ ಕೂಡ ಅಗತ್ಯವಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ಗಳ ನಿಯಮ ಬಾಹಿರ ಓಡಾಟ ಕುರಿತು ಪೊಲೀಸ್ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದರು.
2010- 11ನೇ ಸಾಲಿನಲ್ಲಿ ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ ಇಲಾಖೆ ಸಿಬಂದಿಯನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ಎಂ. ಆರ್. ವಾಸುದೇವ, ಉಪ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಎಚ್. ದಿವಾಕರ್ ಅವರು ಅತಿಥಿಗಳಾಗಿದ್ದರು.
ಕೆಎಸ್‌ಆರ್‌ಟಿಸಿ ಮಂಗಳೂರು ಪ್ರಭಾರ ವಿಭಾಗೀಯ ನಿಯಂತ್ರಣಾಧಿಕಾರಿ ಯಶವಂತ ಕುಮಾರ್ ಸ್ವಾಗತಿಸಿದರು. ಕಾರ್ಖಾನೆಗಳ ಹಿರಿಯ ಉಪ ನಿರ್ದೇಶಕ ನಂಜಪ್ಪ, ವಿಭಾಗೀಯ ಸಂಚಾಲನಾ ಅಧಿಕಾರಿ ದೀಪಕ್ ಅವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English