ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅದ್ಧೂರಿ ಲಕ್ಷ ದೀಪೋತ್ಸವ

9:44 AM, Friday, November 25th, 2016
Share
1 Star2 Stars3 Stars4 Stars5 Stars
(No Ratings Yet)
Loading...

Dharmasthala Laksha Deepotsavaಬೆಳ್ತಂಗಡಿ: ಪ್ರತಿ ವರ್ಷ ಕಾರ್ತಿಕ ಮಾಸದ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರಗುವ ಲಕ್ಷ ದೀಪೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ನೀಡಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇವಸ್ಥಾನ ಹಾಗೂ ದೇವಸ್ಥಾನದ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತದೆ. ಸಂಪ್ರದಾಯ ಬದ್ಧವಾಗಿ ನಡೆಸಿಕೊಂಡು ಬರಲಾಗುತ್ತಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕಡೆಯಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಎಲ್ಲ ಭಕ್ತರ ನಡುವೆ ನಿನ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಇನ್ನು ದೀಪೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದರ ಜೊತೆಗೆ ವಸ್ತು ಪ್ರದರ್ಶನಕ್ಕೂ ಕೂಡ ನಿನ್ನೆ ಚಾಲನೆ ನೀಡಲಾಯಿತು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಮಂಜುನಾಥನ ಸನ್ನಿಧಿಯಲ್ಲಿ ದೀಪ ಹಚ್ಚುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English