ಧರ್ಮಸ್ಥಳ: ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆ

9:14 PM, Friday, November 25th, 2016
Share
1 Star2 Stars3 Stars4 Stars5 Stars
(5 rating, 7 votes)
Loading...

veerendra heggadeಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 69ನೆ ವರ್ಷದ ಜನ್ಮ ದಿನಾಚರಣೆಯನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ಸರಳವಾಗಿ ಆಚರಿಸಲಾಯಿತು.

ಊರ-ಪರವೂರ ಅಭಿಮಾನಿಗಳು ಬಂದು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.

ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮೂಡಬಿದ್ರೆಯ ಡಾ. ಎಂ. ಮೋಹನ ಆಳ್ವ, ಜಿಲ್ಲಾ ಕೃಷಿಕ ಸಮಾಜದ ಆಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ, ಮಂಗಳೂರಿನ ಕೆ. ರಾಜವರ್ಮ ಬಳ್ಳಾಲ್, ಎಸ್.ಡಿ.ಎಂ. ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ರಾಜೇಂದ್ರ ಶೆಟ್ಟಿ ಮೊದಲಾದ ಗಣ್ಯರು ಶುಭಾಶಯ ಸಲ್ಲಿಸಿದರು. ಸಚಿವರುಗಳು, ಗಣ್ಯರು ದೂರವಾಣಿ, ಎಸ್.ಎಂ.ಎಸ್. ಟ್ವೀಟರ್ ಮೂಲಕವೂ ಶುಭಾಶಯ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English