ಸುಬ್ರಹ್ಮಣ್ಯ: ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ ನೆರವೇರಲಿದೆ. ಲಕ್ಷ ದೀಪೋತ್ಸವದೊಂದಿಗೆ ರಥಬೀದಿಯಲ್ಲಿ ಶ್ರೀ ದೇವರ ರಥೋತ್ಸವ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಲಕ್ಷ ದೀಪೋತ್ಸವದಂದು ಲಕ್ಷ ಹಣತೆ ಬೆಳಗಿಸಲಾಗುತ್ತದೆ.
ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಕೆಲವು ಹಣತೆ ದೀಪಗಳನ್ನು ಹಚ್ಚಲಾಗುತ್ತಿತ್ತು. ಈ ಬಾರಿ ಕ್ಷೇತ್ರದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಲಕ್ಷ ಹಣತೆಗಳನ್ನು ಹಚ್ಚುವ ವ್ಯವಸ್ಥೆ ಮಾಡಲಾಗಿದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಮಣ್ಣಿನ ಹಣತೆಯ ಲಕ್ಷ ದೀಪಗಳನ್ನು ರಥಬೀದಿಯಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನದವರೆಗೆ ಹಚ್ಚಲಾಗುವುದು. ದೇವಳದ ವತಿಯಿಂದ ಈಗಾಗಲೇ 25,000 ಮಣ್ಣಿನ ಹಣತೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಹಣತೆಯಲ್ಲಿ ನಾಲ್ಕರಂತೆ ದೀಪ ಬೆಳಗಿ ಒಟ್ಟು ಲಕ್ಷ ದೀಪವನ್ನು ಶ್ರೀ ದೇವರ ಉತ್ಸವದ ಸಂದರ್ಭದಲ್ಲಿ ಉರಿಸಲಾಗುವುದು.
ಹಣತೆಗಳಲ್ಲದೆ ಶ್ರೀ ಕ್ಷೇತ್ರದ ರಥಬೀದಿಯಲ್ಲಿ 75,000 ಕರ್ಪೂರ ಬೆಳಗಲಾಗುವುದು. ಶ್ರೀ ದೇವರ ಹೊರಾಂಗಣ ಉತ್ಸವಾದಿಗಳು ಆರಂಭವಾದ ಬಳಿಕ ಕರ್ಪೂರ ಹಚ್ಚಲಾಗುತ್ತದೆ.
Click this button or press Ctrl+G to toggle between Kannada and English