ಪುತ್ತೂರು: ಪೆರ್ನೆ ಗ್ರಾಮದ ಕಡಂಬು ಬಳಿಯ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಅಡುಗೆ ಅನಿಲ ಸಾಗಾಟದ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಹೆದ್ದಾರಿ ಬದಿಗೆ ಮಗುಚಿ ಬಿದ್ದಿದೆ.
ತಮಿಳುನಾಡು ಮೂಲದ ಚಾಲಕ ಅಲಗುರು ಸ್ವಾಮಿ(30) ಗಾಯಗೊಂಡಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಂಕರ್ನಲ್ಲಿದ್ದ ತಮಿಳುನಾಡು ಮೂಲದ ಕ್ಲೀನರ್ ವೇಲುಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯಲ್ಲಿ ಅನಿಲ ಸೋರಿಕೆಯಾಗಿಲ್ಲ. ಪರಿಣಾಮ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
Click this button or press Ctrl+G to toggle between Kannada and English