ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಉತ್ಸವ

11:16 AM, Wednesday, December 7th, 2016
Share
1 Star2 Stars3 Stars4 Stars5 Stars
(No Ratings Yet)
Loading...

car-festival-in-kudupuಕುಡುಪು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರಗಳಲ್ಲಿ ಒಂದಾಗಿರುವ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಸಹಿತ ನಗರದ ಆಸುಪಾಸಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಮೂಡಬಿದಿರೆ ಸಮೀಪದ ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನ, ಹಳೆಯಂಗಡಿ ಸಮೀಪದ ತೋಕೂರು ಸುಬ್ರಹ್ಮಣ್ಯ ದೇವಸ್ಥಾನ, ಕಿಲ್ಪಾಡಿ ಕುಮಾರಮಂಗಲ ದೇವಸ್ಥಾನ, ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಷಷ್ಠಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಜರಗಿದವು.

ಕುಡುಪು ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಸೋಮವಾರ ಜರಗಿದ್ದು, ಮುಂಜಾನೆಯಿಂದಲೇ ಭಾರೀ ಉದ್ದದ ಸರದಿ ಸಾಲು ಕಂಡು ಬಂದಿತ್ತು. ಸುಮಾರು 40 ಸಾವಿರ ಭಕ್ತರು ದೇವರ ದರ್ಶನ ಪಡೆದರು. ನಾಗಬನದಲ್ಲಿ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ಸೀಯಾಳ ಅಭಿಷೇಕ ನಿರಂತರವಾಗಿ ನಡೆದವು. ಭದ್ರ ಸರಸ್ವತಿತೀರ್ಥ ಸರೋವರದಲ್ಲಿ ಷಷ್ಠಿ ತೀರ್ಥಸ್ನಾನ ವಿಶೇಷವಾಗಿತ್ತು. ದೇವಸ್ಥಾನಕ್ಕೆ ಆಗಮಿಸಿದ ಎಲ್ಲರಿಗೂ ಕುಡುಪು ಗ್ರಾಮಸ್ಥರು ಹಾಗೂ ಪರವೂರಿನ ಭಕ್ತರಿಂದ ನಿರಂತರ ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು.

ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ನಡೆದು ಬಳಿಕ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಜರಗಿತು. ದೇಗುಲದ ಹಾಲ್‌ನಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಪೂಜಾ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಸಂಘ ಸಂಸ್ಥೆಗಳ ಕಾರ್ಯಕರ್ತರು ಸಹಕರಿಸಿದ್ದರು. ಮಂಗಳೂರು ಗ್ರಾಮಾಂತರ ಪೊಲೀಸರು ಬಂದೋಬಸ್ತ್ ಏರ್ಪಡಿಸಿ ಸುವ್ಯವಸ್ಥೆಗೆ ಸಹಕರಿಸಿದರು.

Vedavyas Diwali

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English