ಲಖ್ನೋ: ದೇಶಾದ್ಯಂತ ದೊಡ್ಡ ವಿವಾದಕ್ಕೆ ಹಾಗೂ ಚರ್ಚೆಗೆ ಕಾರಣವಾಗಿದ್ದ ಇಸ್ಲಾಂನ ತ್ರಿವಳಿ ತಲಾಖ್ ಪದ್ಧತಿ ಅಸಂವಿಧಾನಿಕ, ಇದು ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಪೀಠ ಮಹತ್ವದ ತೀರ್ಪನ್ನು ಗುರುವಾರ ನೀಡಿದೆ.
ಮೂರು ಬಾರಿ ತಲಾಖ್ ಎಂದು ಹೇಳಿ ಮಹಿಳೆಗೆ ವಿಚ್ಛೇದನ ನೀಡುವ ಇಸ್ಲಾಂನ ಈ ಪದ್ಧತಿ ಸಂವಿಧಾನ ಬಾಹಿರವಾದದ್ದು ಎಂದು ಅಲಹಾಬಾದ್ ಹೈಕೋರ್ಟ್ ಪೀಠ ಹೇಳಿರುವುದಾಗಿ ಎಎನ್ ಐ ವರದಿ ಮಾಡಿದೆ.
ತ್ರಿವಳಿ ತಲಾಖ್ ಪದ್ಧತಿ ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯ ನಡೆಯಾಗಿದೆ. ಯಾವುದೇ ವೈಯಕ್ತಿಕ ಕಾನೂನು ದೇಶದ ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಪೀಠ ಅಭಿಪ್ರಾಯವ್ಯಕ್ತಪಡಿಸಿದೆ
Click this button or press Ctrl+G to toggle between Kannada and English