ತ್ರಿಪುರ ವಾಸಿನಿ ಕಲ್ಯಾಣ ಮಂಟಪದಲ್ಲಿ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅವರ ಅದ್ಧೂರಿ ಮದುವೆ

3:11 PM, Friday, December 9th, 2016
Share
1 Star2 Stars3 Stars4 Stars5 Stars
(No Ratings Yet)
Loading...

Yash-Radhika-Marriageಬೆಂಗಳೂರು: ಖ್ಯಾತ ಚಿತ್ರನಟರಾದ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅವರ ಮದುವೆ ಶುಕ್ರವಾರ ಅರಮನೆ ಮೈದಾನದ ತ್ರಿಪುರ ವಾಸಿನಿ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನಡೆಯಿತು.

ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಗಳನ್ನು ಹರಸಿದರು.

ವಿವಾಹ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದ ಶ್ರೀಗಳು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ,ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ, ಚಿತ್ರರಂಗದ ಗಣ್ಯರಾದ ಶಿವರಾಜ್‌ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಸೇರಿದಂತೆ ವಿವಿಧ ಕ್ಷೇತ್ರಗಳ ನೂರಾರು ಗಣ್ಯರು, ನಟ ನಟಿಯರು ಉಪಸ್ಥಿತರಿದ್ದರು.

ಶನಿವಾರ ಮತ್ತು ಭಾನುವಾರ ಆರತಕ್ಷತೆ ನಡೆಯಲಿದೆ. ಡಿಸೆಂಬರ್‌ 10ಕ್ಕೆ ಚಿತ್ರರಂಗದ ಗಣ್ಯರು ಮತ್ತು ಎರಡೂ ಕುಟುಂಬದವರ ಆಪ್ತರಿಗೆ ರಿಸೆಪ್ಶನ್‌ ಆಯೋಜಿಸಲಾಗಿದೆ.

ಡಿಸೆಂಬರ್‌ 11ರಂದು ಚಿತ್ರರಂಗದ ಕಾರ್ಮಿಕರಿಗೆ ಮತ್ತು ಯಶ್‌ ಹಾಗೂ ರಾಧಿಕಾ ಪಂಡಿತ್‌ ಅವರ ಅಭಿಮಾನಿಗಳಿಗೆ ಔತಣಕೂಟ ಏರ್ಪಡಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English