ಪುತ್ತೂರು: ಗ್ಯಾಸ್ ಟ್ಯಾಂಕರ್‌ವೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ.
ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆಯಾಗುತ್ತಿದೆ. ಇದರಿಂದ ಕೆಲಹೊತ್ತು ಆತಂಕಕ್ಕೆ ಕಾರಣವಾಗಿತ್ತು. ಆದ್ರೆ, ಹೆಚ್.ಪಿ.ಸಿ.ಎಲ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಗ್ಯಾಸ್ ಶಿಫ್ಟ್ ಮಾಡುವ ಕಾರ್ಯ ಆರಂಭಿಸಿದ್ದಾರೆ.
ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚೆರಿಕ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ತೆರಳುವ ವಾಹನಗಳಿಗೆ ಪೊಲೀಸರು ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ಕಡೆ ಬರುವ ವಾಹನಗಳು ಗೋಳಿತೊಟ್ಟಿನಿಂದ ಕಡಬ ಸಮೀಪದ ಅಲಂಕಾರು ಮೂಲಕ ಉಪ್ಪಿನಂಗಡಿ ಹೋಗುತ್ತಿವೆ. ಬೆಂಗಳೂರಿಗೆ ಹೋಗುವ ವಾಹನಗಳು ಉಪ್ಪಿನಂಗಡಿ-ಸುಬ್ರಮಣ್ಯ ರಸ್ತೆಯ ಅಲಂಕಾರಿನಿಂದ ಹೆದ್ದಾರಿ ಸಂಪರ್ಕಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
Click this button or press Ctrl+G to toggle between Kannada and English