ಬೆಂಗಳೂರು: ರಾಸಲೀಲೆ ಸಿಡಿ ಬಯಲಾದ ಹಿನ್ನೆಲೆಯಲ್ಲಿ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅದನ್ನು ನಾನು ಅಂಗೀಕರಿಸಿದ್ದೇನೆ. ಅದನ್ನು ಶಿಫಾರಸು ಮಾಡಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ. ಅಲ್ಲದೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಎಚ್.ವೈ.ಮೇಟಿ ರಾಸಲೀಲೆ ಸಿಡಿಯನ್ನು ಆರ್ ಟಿಐ ಕಾರ್ಯಕರ್ತ ರಾಜಶೇಖರ್ ನವದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು. ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಮೇಟಿ ಸಿಎಂ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ, ಎಚ್.ವೈ.ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ತಮ್ಮ ವಿರುದ್ಧದ ರಾಸಲೀಲೆ ಆರೋಪವನ್ನು ಸಾರಸಗಟಾಗಿ ಅಲ್ಲಗಳೆದಿದ್ದಾರೆ. ಇದೊಂದು ಷಡ್ಯಂತ್ರ ಎಂದು ಹೇಳಿದ್ದಾರೆ. ಹಾಗಾಗಿ ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ನಡೆಸಿ ಸತ್ಯಾಸತ್ಯಾತೆ ಬಯಲಾಗಬೇಕೆಂಬ ನಿಟ್ಟಿನಲ್ಲಿ ಸಿಐಡಿಗೆ ಒಪ್ಪಿಸಿದ್ದೇನೆ ಎಂದು ಹೇಳಿದರು.
Click this button or press Ctrl+G to toggle between Kannada and English