ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ: ಡಾ. ಜಗದೀಶ್

11:33 AM, Thursday, December 15th, 2016
Share
1 Star2 Stars3 Stars4 Stars5 Stars
(No Ratings Yet)
Loading...

Tourismಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಯಬೇಕು ಎಂಬ ಕೂಗು ಕೇಳಿಬರುತ್ತಿದ್ದರೂ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ಜಗದೀಶ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಂವಾದ, ಸಮಾಲೋಚನಾ ಸಭೆ ನಡೆಯಿತು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದರೂ ಇದರ ಸದುಪಯೋಗವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಸಂಪರ್ಕ ವ್ಯವಸ್ಥೆ, ಶುಚಿತ್ವಕ್ಕೆ ಗಮನಹರಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಯೋಜನೆ ಅನುಷ್ಠಾನಗೊಳಿಸಲು ಪ್ರವಾಸೋದ್ಯಮ ಇಲಾಖೆಯಿಂದ ಆಗಬೇಕಾದ ಕೆಲಸಗಳ ಬಗ್ಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೀಚ್‌‌‌ಗಳಲ್ಲಿ ಬಯಲು ಶೌಚಾಲಯ ಮುಕ್ತಗೊಳಿಸಿ ಅಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.

Tourismಜಿಲ್ಲೆಯ ಧಾರ್ಮಿಕ ಸ್ಥಳಗಳ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯೊಂದಿಗೆ ಬೀಚ್‌‌‌ ಹಾಗೂ ಮಂಗಳೂರು ನಗರದ ಹೊರ ಭಾಗದಲ್ಲಿರುವ ಗಡಿ ಪ್ರದೇಶಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೂ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಕೆನರಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಜೀವನ್ ಸಲ್ದಾನಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ತೇಜಮೂರ್ತಿ ಇತರರು ಉಪಸ್ಥಿತರಿದ್ದರು.

tourism-9

Tourism

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English