ಸುಳ್ಯ: ಎರಡು ದಿನಗಳ ಕಾಲ ನಡೆದ ಯುವಜನ ಮೇಳ, ಯುವಜನ ಹಬ್ಬ ಮತ್ತು ಕರಾವಳಿ ಉತ್ಸವದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ ಸಮಾಜಕ್ಕಾಗಿ ದುಡಿಯುವ ಯುವಕರಿಗೆ ಬೆಂಬಲ, ಪ್ರೋತ್ಸಾಹ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾಜಮಖಿ ಯುವ ಸಮೂಹವನ್ನು ರೂಪಿಸಲು ಯುವಜನ ಇಲಾಖೆಗೆ ಸರ್ಕಾರ ಇನ್ನಷ್ಟು ಅನುದಾನಗಳನ್ನು ನೀಡಿ ಹೆಚ್ಚು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.
ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ. ತಾಲೂಕು ಪಂಚಾಯತ್ ಸುಳ್ಯ, ನಗರ ಪಂಚಾಯತ್ ಹಾಗೂ ಯುವಜನ ಸಂಯುಕ್ತ ಮಂಡಳಿ ಇದರ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ಮತ್ತಿತರರು ಇದ್ದರು.
Click this button or press Ctrl+G to toggle between Kannada and English