ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವಕ್ಕೆ ಚಾಲನೆ

11:03 AM, Saturday, December 24th, 2016
Share
1 Star2 Stars3 Stars4 Stars5 Stars
(No Ratings Yet)
Loading...

Karavali-Uthsavaಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವಕ್ಕೆ ನಗರದ ಕದ್ರಿ ಉದ್ಯಾನವನದಲ್ಲಿ ನಿನ್ನೆ ಸಂಜೆ ಚಾಲನೆ ದೊರೆಯಿತು. ಉತ್ಸವಕ್ಕೆ ಕಲಾಮಾಮಣಿ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ನಾವು ನಮ್ಮ ಜೀವನಶೈಲಿ ಹಾಗೂ ನಾವು ಮಾಡುವ ಕಾರ್ಯಗಳಲ್ಲಿ ಪರಿಪೂರ್ಣತೆ ಮತ್ತು ನ್ಯಾಯವನ್ನು ಪಾಲಿಸಿದರೆ ನ್ಯಾಯ ಮತ್ತು ಯಶಸ್ಸು ನಮ್ಮದಾಗುತ್ತದೆ. ಅನೇಕ ಸೌಂದರ್ಯಭರಿತ ಕಲೆಗಳನ್ನು ಹೊಂದಿರುವ ಅವಿಭಜಿತ ಜಿಲ್ಲೆಯಲ್ಲಿ ಕಲಾಪ್ರಕಾರಗಳ ಉತ್ಸವವನ್ನಾಚರಿಸುತ್ತಿರುವುದು ಸಂತೋಷದ ವಿಚಾರ ಎಂದರು.

ರಾಜ್ಯ ಮತ್ತು ಪಶ್ಚಿಮ ಕರಾವಳಿಯನ್ನು ಪ್ರತಿಬಿಂಬಿಸುವ ಎಲ್ಲ ಭಾಷೆ, ಧರ್ಮ, ಜೀವನ ಸಂಸ್ಕೃತಿ, ಜನಪದ, ಯಕ್ಷಗಾನ ಇತ್ಯಾದಿ ಪ್ರಕಾರದ ಸುಮಾರು 70ಕ್ಕೂ ಹೆಚ್ಚು ತಂಡಗಳ ಸಾಂಸ್ಕೃತಿಕ ಮೆರವಣಿಗೆ – ದಿಬ್ಬಣ ಹಾಗೂ ವಸ್ತು ಪ್ರದರ್ಶನದೊಂದಿಗೆ ಜಿಲ್ಲಾ ಕರಾವಳಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

Karavali-Uthsavaಕರಾವಳಿ ಉತ್ಸವ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಸ್ತು ಪ್ರದರ್ಶನಕ್ಕೆ ಮತ್ತು ಸಚಿವ ಯು.ಟಿ. ಖಾದರ್ ಸಾಂಸ್ಕೃತಿಕ ಮೆರವಣಿಗೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಪ್ರತೀ ವರ್ಷ ಕರಾವಳಿ ಉತ್ಸವವನ್ನು ನಿರ್ದಿಷ್ಠ ಪ್ರದೇಶದಲ್ಲಿಯೇ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ ಬಾರಿ ಕದ್ರಿ ಉದ್ಯಾನವನವನ್ನೇ ಮುಖ್ಯ ಸ್ಥಳವಾಗಿ ಆಯ್ಕೆ ಮಾಡಲಾಗುವುದು ಎಂದರು.

karavali-uthsava-3

karavali-uthsava-4

karavali-uthsava-5

Karavali-Uthsava

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English