ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಸಮಿತಿಯ ನೇತೃತ್ವದಲ್ಲಿ ಇಂದು ಮನಪಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮನಪಾ ಪ್ರತಿಪಕ್ಷ ನಾಯಕಿ ರೂಪಾ ಡಿ.ಬಂಗೇರ, ಮನಪಾ ಆಡಳಿತ ವ್ಯವಸ್ಥೆ ಕುಸಿಯುತ್ತಿದೆ. ಅಭಿವೃದ್ಧಿ ಕುಂಠಿತಗೊಳ್ಳುತ್ತಿವೆ. ದಿನಕ್ಕೊಂದು ಹೊಸ ಘೋಷಣೆ, ಭರವಸೆ ನೀಡಿ ಪ್ರಚಾರ ಗಿಟ್ಟಿಸುತ್ತಿದೆಯೇ ವಿನಃ ಸೂಕ್ತ ಆಡಳಿತ ನೀಡುತ್ತಿಲ್ಲ. ಆಸ್ತಿ ತೆರಿಗೆಯನ್ನು ಶೇ. 15ರಷ್ಟು ಹೆಚ್ಚಿಸಿ ವಿಶ್ವಾಸದ್ರೋಹ ಮಾಡಿದೆ ಎಂದು ಆರೋಪಿಸಿದರು.
ನೀರಿನ ಕನಿಷ್ಠ ದರವನ್ನು 100 ರೂ. ಏರಿಸಿರುವುದು ಖಂಡನೀಯ. ಉತ್ತಮ ಆಡಳಿತ ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್, ಜನರಿಗೆ ಹೊರೆಯಾಗುವ ನಿಯಮಗಳನ್ನು ಜಾರಿಗೊಳಿಸಲು ಮುಂದಾಗುತ್ತಿದೆ ಎಂದು ಅವರು ಆಪಾದಿಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಹಾಗೂ ಬಿಜೆಪಿಯ ಮನಪಾ ಸದಸ್ಯರುಗಳು ಭಾಗವಹಿಸಿದ್ದರು.
Click this button or press Ctrl+G to toggle between Kannada and English