ಮಂಗಳೂರು: ಪಣಂಬೂರು ಕಡಲ ತೀರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಮೂರು ದಿನಗಳ ಬೀಚ್ ಉತ್ಸವವನ್ನು ಮಂಗಳೂರು ಸಹಾಯಕ ಕಮೀಶನರ್ ರೇಣುಕಾ ಪ್ರಸಾದ್ ಗಾಳಿ ಪಟ ಹಾರಿಸುವ ಮೂಲಕ ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಕರಾವಳಿ ಉತ್ಸವ ನಡೆಯುತ್ತಿದ್ದು, ಇದರ ಜೊತೆಗೆ ನಿನ್ನೆ ಬೀಚ್ ಉತ್ಸವಕ್ಕೆ ಚಾಲನೆ ದೊರೆತಿದೆ. ಜ.1ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಬೀಚ್ ಉತ್ಸವ ನಡೆಯಲಿದೆ.
ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಬೀಚ್ ವಾಲಿಬಾಲ್, ನೃತ್ಯ, ಸ್ಕೇಟಿಂಗ್, ಬೀಚ್ ತ್ರೋಬಾಲ್, ಯೋಗ, ಉದಯ ರಾಗ, ಬೊಟ್ ರೇಸ್, ಆಹಾರೋತ್ಸವ, ಗಾಳಿಪಟ ಉತ್ಸವ ಮುಂತಾದ ಮನೋರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .
ಸಮಾರಂಭದಲ್ಲಿ ಬೀಚ್ ಉತ್ಸವ ಸಮಿತಿಯ ಸಂಘಟಕರಾದ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಮಹೇಶ್ ಕುಮಾರ್, ಮಾಜಿ ಉಪನಿರ್ದೇಶಕ ಸುರೇಶ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English