[1]ಬೆಳ್ತಂಗಡಿ: ಪಿಕಪ್ ವಾಹನಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಉಪ್ಪಾರಪಳಿಕೆಯಲ್ಲಿ ಸಂಭವಿಸಿದೆ.
ವಿಟ್ಲ ಮೂಲದ ಫೋಟೋಗ್ರಾಫರ್ ಧನಂಜಯ (35) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಘಟನಾಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.