ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತವಾಗಿ ಗ್ಯಾಸ್ ಸ್ಟೌವ್ ಮತ್ತು ರೆಗ್ಯುಲೇಟರ್

1:24 PM, Wednesday, January 11th, 2017
Share
1 Star2 Stars3 Stars4 Stars5 Stars
(No Ratings Yet)
Loading...

utkhader ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ರಾಜ್ಯ ಸರ್ಕಾರ ಉಚಿತವಾಗಿ ಗ್ಯಾಸ್ ಸ್ಟೌವ್ ಮತ್ತು ರೆಗ್ಯುಲೇಟರ್ ನೀಡಲು ಮುಂದಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಈ ಕುರಿತು ಮಾತನಾಡಿ,’ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಒಂದು ಸಿಲಿಂಡರ್ ಸೌಲಭ್ಯವುಳ್ಳ ಅಡುಗೆ ಅನಿಲ ಸಂಪರ್ಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಉತ್ತಮ ಗುಣಮಟ್ಟದ ಸ್ಟೌವ್ ಮತ್ತು ರೆಗ್ಯುಲೇಟರ್ ನೀಡಲಿದೆ’ ಎಂದರು.

ಕರ್ನಾಟಕದಲ್ಲಿ ಉಜ್ವಲ ಯೋಜನೆಯಡಿ ಸಿಲಿಂಡರ್ ಪಡೆಯಲು ಸುಮಾರು 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಒಬ್ಬರಿಗೆ ಒಂದು ಸಾವಿರ ರು ವೆಚ್ಚ ವಾಗಲಿದ್ದು. ಅದನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದರು.

ಶೀಘ್ರದಲ್ಲಿಯೇ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂದು ಉಚಿತವಾಗಿ ಸ್ಟೌವ್ ನೀಡುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English