ಡಿ ವೈ ಎಫ್ ಐ – ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ -ಕಾರಿಗೆ ಬೆಂಕಿ

12:39 PM, Thursday, January 12th, 2017
Share
1 Star2 Stars3 Stars4 Stars5 Stars
(No Ratings Yet)
Loading...

car fire ಕಾಸರಗೋಡು  : ಡಿ ವೈ ಎಫ್ ಐ – ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ಬುಧವಾರ ಸಂಜೆ ಬೋವಿಕ್ಕಾನದಲ್ಲಿ ನಡೆದಿದ್ದು, ಒಂದು ಕಾರಿಗೆ ಬೆಂಕಿ ಹಚ್ಚಲಾಗಿದೆ.

ಆಟೋ ರಿಕ್ಷಾ ಹಾನಿಗೊಳಿಸಲಾಗಿದ್ದು , ಅಂಗಡಿಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಲಾಗಿದೆ.

ಎಂಡೋಸಲ್ಫಾನ್ ಸಂತ್ರಸ್ಥರಿಗೆ ನಷ್ಟ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಅಭಿನಂದನೆ ಸಲ್ಲಿಸಿ ಡಿ ವೈ ಎಫ್ ಐ ಕಾರ್ಯಕರ್ತರು ಸಂಜೆ ಬೋವಿಕ್ಕಾನ ಪೇಟೆಯಲ್ಲಿ ಮೆರವಣಿಗೆ ನಡೆಸಿತ್ತು .ಈ ಸಂದರ್ಭದಲ್ಲಿ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಮಾರುತಿ ಕಾರೊಂದಕ್ಕೆ ಬೆಂಕಿ ಹಚ್ಚಲಾಗಿದೆ. ಇನ್ನೊಂದು ಆಟೋರಿಕ್ಷಾವನ್ನು ಹಾನಿಗೊಳಿಸಲಾಗಿದೆ.

ಡಿ ವೈ ಎಫ್ ಐ ಕಾರ್ಯಕರ್ತರ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲೆಸೆದಿದ್ದು , ಈ ಸಂದರ್ಭದಲ್ಲಿ ಘರ್ಷಣೆ ನಡೆದಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರು ನಿಯೋಜಿಸಲಾಗಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English