ಪಿಎಫ್‌ಐ ವತಿಯಿಂದ 180 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

2:28 PM, Monday, January 16th, 2017
Share
1 Star2 Stars3 Stars4 Stars5 Stars
(No Ratings Yet)
Loading...

PFIಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವತಿಯಿಂದ 180 ಮಂದಿ ವಿದ್ಯಾರ್ಥಿಗಳಿಗೆ 12.93 ಲಕ್ಷ ರೂ. ವೆಚ್ಚದಲ್ಲಿ ವಿದ್ಯಾರ್ಥಿ ವೇತನವನ್ನು ಶಾಸಕ ಜೆ.ಆರ್ ಲೋಬೋ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜ್ಞಾನ ಮತ್ತು ವ್ಯಕ್ತಿತ್ವ ವಿಕಸನ ಜೀವನದಲ್ಲಿ ಮುಖ್ಯ ಪಾತ್ರವನ್ನು ವಹಿಸಲಿದ್ದು, ಈ ಎರಡೂ ಅಂಶಗಳಿಂದ ಸಾಮಾಜಿಕ ಸಮಸ್ಯೆಯನ್ನು ಎದರಿಸುವುದರೊಂದಿಗೆ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಎಫ್‌ಐ ರಾಜ್ಯಾಧ್ಯಕ್ಷ ಶಾಫಿ ಬೆಳ್ಳಾರೆ ವಹಿಸಿದ್ದರು. ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್ , ಮನಪಾ ಸದಸ್ಯ ಅಯಾಝ್ ಕೃಷ್ಣಾಪುರ, ಪಿಎಫ್‌ಐನ ದ.ಕ. ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English