ಕೊಳವೆ ಬಾವಿ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಪತ್ರ ಬರೆದ ಜಿಲ್ಲಾಧಿಕಾರಿ

12:51 AM, Thursday, January 19th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

dc-borewellಮಂಗಳೂರು:  ಕೊಳವೆ ಬಾವಿ ಕೊರೆಯಲು ಇರುವ ನಿಷೇಧ  ಹಿಂಪಡೆಯಬೇಕು ಎಂದು ವಿನಂತಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ತಿಳಿಸಿದ್ದಾರೆ.

ಸರ್ಕಾರಕ್ಕೆ ಪತ್ರ ಬರೆದಿರುವ ವಿಷಯವನ್ನು ಬಹಿರಂಗಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಇಲ್ಲ. ಈ ಭಾಗದಲ್ಲಿ ಕೃಷಿಗಾಗಿ ಯಾವುದೇ ನೀರಾವರಿ ಯೋಜನೆಗಳಿಲ್ಲ. ಅದೇ ರೀತಿ ಕೆಲವೊಂದು ಭಾಗಗಳಿಗೆ ಕೊಳವೆ ಮೂಲಕ ನೀರು ಒದಗಿಸುವ ಯೋಜನೆಗಳೂ ಇಲ್ಲ. ಆದುದರಿಂದ ದಕ್ಷಿಣ ಕನ್ನಡದಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅವಕಾಶ ಕಲ್ಪಿಸಬೇಕು ಎಂಬ ಆಗ್ರಹಗಳು ಬಂದಿದ್ದವು ಎಂದು ಅವರು ಹೇಳಿದರು.

ದಕ್ಷಿಣ ಕನ್ನಡದಲ್ಲಿ ಕೊಳವೆ ಬಾವಿ ಕೊರೆಯಲು ಮುಂದಾದವರ ಮೇಲೆ ಯಾವುದೇ ಕ್ರಿಮಿನಲ್ ಕೇಸು ದಾಖಲಿಸಲಿಲ್ಲ. ಅಂತಹವರಿಗೆ ಸರ್ಕಾರದ ನಿಷೇಧಾಜ್ಞೆಯನ್ನು ಮನವರಿಕೆ ಮಾಡಿಕೊಡಲಾಗಿದೆ. ಸರ್ಕಾರದ ಆದೇಶ ಉಲ್ಲಂಘನೆಯ ಭಾರತೀಯ ದಂಡ ಸಂಹಿತೆ 177ರನ್ವಯ ಕೇಸು ದಾಖಲಿಸುವ ಪ್ರಸಂಗಗಳು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English