ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಯೊಂದರಲ್ಲಿ ಅಗ್ನಿ ಅವಘಡ: 2 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ

12:29 PM, Saturday, January 21st, 2017
Share
1 Star2 Stars3 Stars4 Stars5 Stars
(No Ratings Yet)
Loading...

Shart Sharcuteಮಂಗಳೂರು: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತಬೈಲು ಎಂಬಲ್ಲಿ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಶಾರ್ಟ್‌ ಸರ್ಕ್ಯೂಟ್‌ನಿಂದ ಇಲ್ಲಿಯ ಸುರೇಶ್ ಆಚಾರ್ಯ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಮನೆಯ ಛಾವಣಿ ಹಾಗೂ ಮನೆಯೊಳಗಿನ ಪೀಠೋಪಕರಣಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ.

ಸ್ಥಳೀಯ ಮುಖಂಡ ಮಿತ್ತಬೈಲು ವಾಸುದೇವ ನಾಯಕ್ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ರಕ್ಷಣಾ ಕಾರ್ಯದಲ್ಲಿ ನೆರವಾದರು. ಶಾಸಕ ಅಭಯಚಂದ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಒದಗಿಸುವ ಭರವಸೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಪಂಚಾಯತ್ ಸದಸ್ಯ ಶಶಿಧರ ನಾಯಕ್, ತಹಸೀಲ್ದಾರ್ ಮಹಮ್ಮದ್ ಇಸಾಕ್, ಗ್ರಾಮ ಲೆಕ್ಕಿಗ ಗೋಪಾಲ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English