ಮಂಗಳೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಂಬಳವನ್ನು ನಿಷೇಧಿಸ ಬಾರದು, ಕರಾವಳಿ ಜನರ ಸಾಂಸ್ಕೃತಿಕ ಕ್ರೀಡೆಯಾಗಿರುವ ಕಂಬಳಕ್ಕೆ ಇತಿಹಾಸವಿದೆ. ಈ ಬಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬರ ಅಧ್ಯಯಕ್ಕೆ ಆಗಮಿಸಿರುವ ಅವರು ಬಿಜೆಪಿ ಕಚೇರಿಯಲ್ಲಿ ಮಾತನಾಡಿದರು. ಕಂಬಳ ಕುರಿತು ಹೈಕೋರ್ಟ್ ತೀರ್ಪು ಸಹ ಜನರ ಭಾವನೆಗಳಿಗೆ ಧಕ್ಕೆ ತರುವುದಿಲ್ಲ ಮತ್ತು ಹೋರಾಟಕ್ಕೆ ಎಡೆ ಮಾಡಿಕೊಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಇನ್ನು ಎಂಆರ್‌ಪಿಎಲ್ ಘಟಕಕ್ಕೆ ಜನರ ವಿರೋಧದ ಮಧ್ಯೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಕಾರವಿಲ್ಲವೆಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.
ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಎಡವಿದೆ ಎಂದು ಆರೋಪಿಸಿದ ಬಿಎಸ್‌ವೈ, ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಬಿಜೆಪಿ ಧ್ವನಿ ಎತ್ತಲಿದೆ. ರಾಜ್ಯ ಬಜೆಟ್‌ನಲ್ಲೂ ಬರ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಹೋರಾಟ ನಡೆಸಲಾಗುವುದು ಎಂದರು.
Click this button or press Ctrl+G to toggle between Kannada and English