ರಾಮಚಂದ್ರಾಪುರ ಮಠದ ನೇತೃತ್ವದಲ್ಲಿ 11 ಸಾವಿರ ಕಿ.ಮೀ. ಕ್ರಮಿಸಿದ ಮಂಗಲ ಗೋಯಾತ್ರೆ

12:27 AM, Wednesday, January 25th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Mangala Go Yatreಮಂಗಳೂರು:  ದೇಶೀಯ ಗೋತಳಿಗಳ ಸಂರಕ್ಷಣೆಯ ಉದ್ದೇಶದಿಂದ ಶ್ರೀ ರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ಕೈಗೊಂಡ ಮಂಗಲ ಗೋಯಾತ್ರೆ 11 ಸಾವಿರ ಕಿ.ಮೀ. ಕ್ರಮಿಸಿದ್ದು, ಈ ಯಾತ್ರೆಯುದ್ದಕ್ಕೂ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ರಾಜಕೀಯವಾಗಿ ಪಕ್ಷಭೇದ ಮರೆತು ಬೆಂಬಲ ವ್ಯಕ್ತವಾಗಿದೆ ಎಂದು ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಬೇಕು. ಗೋವಂಶವನ್ನು ಉಳಿಸಬೇಕು. ಈ ಮಂಗಲ ಯಾತ್ರೆಯ ಮೂಲಕ ಸರ್ಕಾರ, ಸಮಾಜಕ್ಕೆ ಗೋವನ್ನು ಕಾಪಾಡುವ ಸಂದೇಶ ಹೋಗಬೇಕು. ಗೋಮಾಂಸ ರಫ್ತು ನಿಷೇಧಿಸಬೇಕು. ಗೋವು ಕಟುಕರ ವಶವಾಗದೆ ರೈತರ ಬಳಿ ಇರಬೇಕು. ಗೋವನ್ನು ಮಾರಾಟ ಮಾಡಿದರೆ ಲಾಭ ಎಂದಾಗದೆ ಗೋವನ್ನು ಸಾಕುವುದೇ ಲಾಭ ಎಂಬ ಭಾವನೆ ಜನತೆಯಲ್ಲಿ ಮೂಡಬೇಕು. ಎಲ್ಲ ರೋಗಗಳಿಗೆ ಗೋವಿನಲ್ಲಿ ಚಿಕಿತ್ಸೆ ಇದೆ ಎಂಬುದನ್ನು ಎಲ್ಲರೂ ತಿಳಿಯಬೇಕು. ಗೋ ಆರ್ಥಿಕತೆ ಲಾಭದಾಯಕ ಎಂಬುದರ ಅರಿವು ಮೂಡಿಸುವುದು ಈ ಯಾತ್ರೆಯ ಉದ್ದೇಶ ಎಂದರು.

Mangala Go Yatreಮಲೆಮಹದೇಶ್ವರ ಬೆಟ್ಟದಲ್ಲಿರುವ ಸುಮಾರು 1 ಲಕ್ಷದಷ್ಟು ಬರಗೂರು ಗೋತಳಿಗಳಿಗೆ ಸಂಕಷ್ಟ ಎದುರಾಗಿದೆ. ಅಲ್ಲಿನ ಬೆಟ್ಟದ ಸುತ್ತ ಸರ್ಕಾರ ಬೇಲಿ ಹಾಕಿರುವುದರಿಂದ ಬರಗೂರು ತಳಿಗಳು ಮೇವಿಗಾಗಿ ಪರದಾಡುವಂತಾಗಿದೆ. ಅಲ್ಲದೆ ಅಲ್ಲಿನ ಮೂಲ ನಿವಾಸಿಗಳಾದ 100 ಸೋಲಿಗರ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಗೋಯಾತ್ರೆಯ ಮಹಾಮಂಗಲ ಯಾತ್ರೆ ನಡೆಯುವ ಕೂಳೂರಿನಲ್ಲಿ ಯಾವುದೇ ನೀರು ಹರಿವಿನ ಜಾಗವನ್ನು ಒತ್ತುವರಿ ಮಾಡಿಲ್ಲ. ಈ ಕಾರ್ಯಕ್ರಮದಿಂದ ಪ್ರಕೃತಿ, ಕಾನೂನು ಹಾಗೂ ಸರ್ಕಾರಕ್ಕೆ ಯಾವುದೇ ತೊಂದರೆಯನ್ನು ಮಾಡುತ್ತಿಲ್ಲ. ಕಾರ್ಯಕ್ರಮದ ಜಾಗಕ್ಕೂ ಸಮಾವೇಶಕ್ಕೂ ಸಂಬಂಧ ಇಲ್ಲ ಎಂದು ರಾಘವೇಶ್ವರಶ್ರೀ ಸ್ಪಷ್ಟಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English