ಕದ್ರಿ ಉದ್ಯಾನವನದಲ್ಲಿ ನಾಲ್ಕು ದಿನದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

9:42 PM, Thursday, January 26th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Palapushpa ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ಸಿರಿ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ  ಜನವರಿ. 26 ರಿಂದ 29 ರವರೆಗೆ ಕದ್ರಿ ಉದ್ಯಾನವನದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು .

ಫಲಪುಷ್ಪ ಪ್ರದನರ್ಶದಲ್ಲಿ ಸುಮಾರು  10 ಅಡಿ ಎತ್ತರದಲ್ಲಿ ಉಳ್ಳಾಲದ ವೀರರಾಣಿ ಅಬ್ಬಕ್ಕಳ ಪ್ರತಿಕೃತಿ ಹಾಗೂ ಕುದುರೆಯನ್ನು  ಹೂವುಗಳಿಂದ ರಚಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ನಿರ್ಮಿಸಿದ ಆನೆ, ಸೈನಿಕರು ಎಲ್ಲ ಸೇರಿ ಸುಮಾರು 9 ಅಡಿ ಉದ್ದ ಹಾಗೂ 4 ಅಡಿ ಅಗಲ ಜಾಗದಲ್ಲಿ ಇದನ್ನು ಸಿದ್ಧಪಡಿಸಲಾಗಿದೆ.

Palapushpa ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆರ್ಥಿಕವಾಗಿ ಲಾಭದಾಯಕವಾಗಿರುವ ತೋಟಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ಈ ಬಗ್ಗೆ ಜಾಗೃತಿ ಮೂಡಿಸಲು ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಇನ್ನು ಅರಣ್ಯ ಇಲಾಖೆಯಿಂದಲೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆ ಅರಣ್ಯ ವನಗಳನ್ನು ಬೆಳೆಸುವುದು, ಫ್ರೀ ಪಾರ್ಕ್‌, ಸಸ್ಯ ಬೆಳೆಸಲು ಪ್ರೋತ್ಸಾಹ ನೀಡುವುದು ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮೇಯರ್ ಹರಿನಾಥ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್.ರವಿ, ಪಾಲಿಕೆ ಸದಸ್ಯರಾದ ಶಶಿಧರ ಹೆಗ್ಡೆ, ಕವಿತಾ ಸನಿಲ್, ತೋಟಗಾರಿಕಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಇಂದಿನಿಂದ ಜ. 29ರ ತನಕ ಪ್ರದರ್ಶನವಿದ್ದು, ವಿದ್ಯಾರ್ಥಿಗಳು ಮತ್ತು ಹಿರಿಯರಿಗೆ ಉಚಿತ ಪ್ರವೇಶವಿದೆ. ಸಾರ್ವಜನಿಕರಿಗೆ 20, ಮಕ್ಕಳಿಗೆ 10 ರೂ. ಶುಲ್ಕ ವಿಧಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English