ಮಂಗಳೂರು : ನಗರಕ್ಕೆ ತುಂಬೆಯಿಂದ ಸರಬರಾಜು ಆಗುತ್ತಿರುವ ಕಲುಷಿತ ನೀರಿನ ಪರೀಕ್ಷೆಗೆ ಎರಡು ಪಕ್ಷದ ಕಾರ್ಪೊರೇಟರ್‌ಗಳು ತುಂಬೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ನಿನ್ನೆ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿದರು.
ಬಂಟ್ವಾಳ ತಾಲೂಕಿನ 18 ಕಡೆಗಳಲ್ಲಿ ಕಲುಷಿತ ನೀರುಗಳನ್ನು ನೇತ್ರಾವತಿ ನದಿಗೆ ಹರಿದು ಬಿಡಲಾಗುತ್ತದೆ ಎಂದು ಮನಪಾ ಸಭೆಯಲ್ಲಿ ಧ್ವನಿಯೆತ್ತಿದ್ದ ಪ್ರತಿಪಕ್ಷದ ಸದಸ್ಯರ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ..
ಈ ಆರೋಪಕ್ಕೆ ಉತ್ತರಿಸಿದ ಆಡಳಿತ ಪಕ್ಷ, ಕುಡಿಯಲು ಶುದ್ಧೀಕರಿಸಿದ ನೀರನ್ನೇ ಮಂಗಳೂರಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಸಮರ್ಥಿಸಿದರು. ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಮನಪಾಕ್ಕೆ ಪೂರೈಕೆಯಾಗುವ ನೀರಿನಲ್ಲಿ ಕ್ಲೋರೋಫಾರ್ಮ್ ಬ್ಯಾಕ್ಟೀರಿಯಾ ಇರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ತಾವು ಅದನ್ನು ಅಲ್ಲಗಳೆದಿದ್ದೀರಿ.
ಈ ಮಧ್ಯೆ ಮಾಜಿ ಸಚಿವರು ಬಂಟ್ವಾಳದ ನೇತ್ರಾವದಿ ನದಿ ತೀರಕ್ಕೆ ಭೇಟಿ ನೀಡಿದ್ದು, ಅವರೊಂದಿಗೆ ಹಲವು ಕಾರ್ಪೊರೇಟರ್‌ಗಳೂ ಇದ್ದರು. ಸುಮಾರು 18 ಕಡೆ ಕಲುಷಿತ ನೀರುಗಳು ನೇತ್ರಾವದಿ ನದಿಗೆ ಹರಿದು ಬರುತ್ತಿದೆ. ಸತ್ತ ಹಂದಿಯೂ ನದಿ ಪಾಲಾದುದು ಕಂಡು ಬಂದಿದೆ. ಇದೇ ನೀರನ್ನು ಪಾಲಿಕೆ ವ್ಯಾಪ್ತಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಸದಸ್ಯ ಸುಧೀರ್ ಶೆಟ್ಟಿ ಆರೋಪಿಸಿದರು.
ಸಭೆಯಲ್ಲಿ ಉಪಮೇಯರ್ ಸುಮಿತ್ರಾ ಕರಿಯ, ಆಯುಕ್ತ ಮುಹಮ್ಮದ್ ನಝೀರ್, ತೆರಿಗೆ ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಅಪ್ಪಿ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ ಬಶೀರ್ ಅಹ್ಮದ್ ಉಪಸ್ಥಿತರಿದ್ದರು.
ಮನಪಾ ಸಚೇತಕ ಶಶಿಧರ ಹೆಗ್ಡೆ, ಸದಸ್ಯರಾದ ದೀಪಕ್ ಪೂಜಾರಿ, ಪುರುಷೋತ್ತಮ ಚಿತ್ರಾಪುರ, ಕೆ.ಮುಹಮ್ಮದ್, ಬಿ.ಪ್ರಕಾಶ್, ನಾಗವೇಣಿ, ದಯಾನಂದ ಶೆಟ್ಟಿ, ಅಬ್ದುಲ್ ಅಝೀಝ್ ಕುದ್ರೋಳಿ, ಅಝಾಝ್ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡರು.
Click this button or press Ctrl+G to toggle between Kannada and English