ಮಂಗಳೂರು: ವೆಬ್‌ಸೈಟ್ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೋಟೆಕಾರು ಸಮೀಪದ ಶೇಖ್ ಮುಹಮ್ಮದ್ ರಫೀಕ್ (40), ಮಡಿಕೇರಿಯ ಬಾಳುಗೋಡು ನಿವಾಸಿ ದೀಪಕ್ (43) ಎಂಬುವರು ಬಂಧಿತರ ಆರೋಪಿಗಳು. ಆರೋಪಿಗಳಿಂದ ಒಂದು ರಿಕ್ಷಾ, 2 ಮೊಬೈಲ್ ಫೋನ್ ಹಾಗೂ 12,500 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಲಾಡ್ಜ್‌ವೊಂದನ್ನು ಕೇಂದ್ರೀಕರಿಸಿ ಈ ಇಬ್ಬರು ಆರೋಪಿಗಳು ವೆಬ್‌ಸೈಟ್ ಮೂಲಕ ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ನಗರದ ಹಳೆ ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಹಾಗೂ ವಶಪಡಿಸಿಕೊಂಡ ಸ್ವತ್ತನ್ನು ಮುಂದಿನ ಕ್ರಮಕ್ಕಾಗಿ ಬಂದರು ಠಾಣೆಗೆ ಹಸ್ತಾಂತರಿಸಲಾಗಿದೆ.
ಸಿಸಿಬಿ ವಿಭಾಗದ ಇನ್‌ಸ್ಪೆಕ್ಟರ್ ಸುನೀಲ್ ವೈ. ನಾಯಕ್, ಪಿಎಸ್‌ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English