ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳದೆ ಯಾವುದೇ ಕಾರಣಕ್ಕೂ ಟೋಲ್ ಸಂಗ್ರಹಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಎಚ್ಚರಿಸಿದ್ದಾರೆ.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ಚತುಷ್ಪಥ ಕಾಮಗಾರಿಗೆ ನಾಗರಿಕರು ಬೆಂಬಲ ಸೂಚಿಸಿದ್ದಾರೆ. ರಸ್ತೆಯ ವಿನ್ಯಾಸದಂತೆ ಕಾಮಗಾರಿ ನಡೆಯಬೇಕಿತ್ತು. ಆದರೆ ಮೊದಲು ತಯಾರಿಸಿದ ನಕ್ಷೆಯಂತೆ ರಸ್ತೆಯನ್ನು ನಿರ್ಮಿಸಿಲ್ಲ. ಕೆಲವೆಡೆ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿಗಳು ನಡೆದಿವೆ.
ರಸ್ತೆಯ ಕಾಮಗಾರಿ ಶೇ. 95 ರಷ್ಟು ಪೂರ್ಣಗೊಂಡಿಲ್ಲ. ಆದರೂ ಏಕಾಏಕಿ ಟೋಲ್ ಸಂಗ್ರಹಕ್ಕೆ ಸಿದ್ಧತೆ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳಿಸದೆ ತಲಪಾಡಿಯಲ್ಲಿ ನಿರ್ಮಿಸಿದ ಟೋಲ್ ಗೇಟ್‌ನಲ್ಲಿ ಟೋಲ್ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಇನ್ನು ಟೋಲ್ ಗೇಟ್‌ನಲ್ಲಿ ಅವೈಜ್ಞಾನಿಕವಾಗಿ ಹಾಗೂ ತರಾತುರಿಯಲ್ಲಿ ಟೋಲ್ ಸಂಗ್ರಹಿಸುತ್ತಿರುವುದರ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದರು.
Click this button or press Ctrl+G to toggle between Kannada and English