ಮಂಗಳೂರು: ಯೋಗದಿಂದ ಜನರು ನೆಮ್ಮದಿಯುತ ಆರೋಗ್ಯಕರ ಜೀವನವನ್ನು ಕಂಡುಕೊಳ್ಳಲು ಸಾಧ್ಯವಾಗಿದ್ದು, ಯೋಗದ ಮಹತ್ವವನ್ನು ಇಂದು ಇಡೀ ವಿಶ್ವವೇ ಅರಿತುಕೊಂಡಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅವರು ಮಂಗಳೂರು ವಿಶ್ವವಿದ್ಯಾಲಯದ ಮಾನವಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠ ಆಶ್ರಯದಲ್ಲಿ ಸೌತ್ ಕೋರಿಯಾದ ವಾಂಕ್ವಾಂಗ್ ಡಿಜಿಟಲ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿವಿಯಲ್ಲಿ ಐದು ದಿನಗಳ ಕಾಲ ಆಯೋಜಿಸಿರುವ ‘ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಲೋನವಾಲ ಕೈವಲ್ಯ ಧಾಮದ ವೈಜ್ಞಾನಿಕ ಸಂಶೋಧನಾ ಕೇಂದ್ರದ ಸಂಶೋಧನಾ ಅಧಿಕಾರಿ ಹಾಗೂ ಸರ್ಜನ್ ಡಾ. ಎಸ್.ಡಿ.ಪಾಠಕ್ , ದಕ್ಷಿಣ ಕೊರಿಯಾದ ವಾಂಕ್ವಾಂಗ್ ವಿಶ್ವವಿದ್ಯಾಲಯದ ಪ್ರೊ. ಜಾಂಗ್ ಸೂನ್ ಸೂಯ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English