ಮಂಗಳೂರು: ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಎರಡು ದಿನಗಳ ಕಾಲ ನಡೆಯುವ ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಉದ್ಘಾಟಿಸಲಿದ್ದಾರೆ ಎಂದು ಮನಪಾ ಮೇಯರ್ ಹರಿನಾಥ್ ಹೇಳಿದರು.
ಮನಪಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಯು.ಐ.ಡಿ.ಎಫ್.ಸಿ, ಕರ್ನಾಟಕ ಸರಕಾರ, ವಿಶ್ವ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಈ ಕಾರ್ಯಾಗಾರದಲ್ಲಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ತುಮಕೂರು ಸೇರಿದಂತೆ 6 ಮಹಾನಗರ ಪಾಲಿಕೆಯ ಅಧಿಕಾರಿಗಳಲ್ಲದೆ ವಿಶ್ವ ಬ್ಯಾಂಕ್ ಕ್ಷೇತ್ರ ಪರಿಣಿತರು, ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಚಿವ ರಮಾನಾಥ ರೈ, ಯು.ಟಿ. ಖಾದರ್, ಸಂಸದರು, ಶಾಸಕರು ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮನಪಾ ಮೇಯರ್ ಹರಿನಾಥ್ ತಿಳಿಸಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಮನಪಾ ಆಯುಕ್ತ ಮುಹಮ್ಮದ್ ನಝೀರ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕವಿತಾ ಸನಿಲ್, ಅಪ್ಪಿಲತಾ, ಲ್ಯಾನ್ಸಿ ಲೋಟ್ ಪಿಂಟೊ, ಮನಪಾ ಜಂಟಿ ಆಯುಕ್ತ ಗೋಕುಲ್ ದಾಸ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English