ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಮೋಟರ್ ಕಾಯ್ದೆ ವಿರೋಧಿಸಿ ನಗರದ ಆರ್‌ಟಿಓ ಕಚೇರಿ ಮುಂಭಾಗದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಮೋಟಾರ್ ಕಾಯ್ದೆಯಿಂದ ಜನಸಾಮನ್ಯರು ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಮ್ ಕೋಡಿಜಾಲ್ ಅವರು ಮೋಟರ್ ಕಾಯ್ದೆಯಿಂದ ಚಾಲಕರ ಲೈಸೆನ್ಸ್ ರದ್ದಾದಲ್ಲಿ 5 ವರ್ಷಗಳವರೆಗೆ ಪರವಾನಗಿ ರದ್ದಾಗುತ್ತದೆ. ಇದರಿಂದ ಅವರ ಕುಟುಂಬದ ನಿರ್ವಹಣೆ ಸಾಧ್ಯವಿಲ್ಲ ಎಂದು ಹೇಳಿದರು.
Click this button or press Ctrl+G to toggle between Kannada and English