ಮಂಗಳೂರು: ಸಮುದ್ರದ ನೀರನ್ನು ಶುದ್ಧೀಕರಿಸಿ ರಾಜ್ಯದ ವಿವಿಧ ಕಡೆಗಳಿಗೆ ಪೂರೈಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದರು.
ನಗರದಲ್ಲಿ ಸ್ಮಾರ್ಟ್ ಸಿಟಿ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಪ್ರಕ್ರಿಯೆಯನ್ನು ಅಧ್ಯಯನ ಮಾಡಲು ಕೊರಿಯಾದ ತಜ್ಞರು ಆಗಮಿಸಿದ್ದಾರೆ.
ವಿಶೇಷ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಜಾರಿಯಲ್ಲಿದೆ. ಇದರ ಪೈಪ್‌ಲೈನ್‌ಗಳನ್ನು ಬಳಸಿ ಸಮುದ್ರದ ನೀರನ್ನು ಪೂರೈಸಲಾಗುವುದು ಎಂದು ತಿಳಿಸಿದರು.
Click this button or press Ctrl+G to toggle between Kannada and English